‘ಶಿಗ್ಗಾವಿ ತಾಲ್ಲೂಕು ದರ್ಶನ’ ಕೃತಿಯು ಎಚ್.ಎನ್. ಮುಗಳಿ ಅವರ ಲೇಖನಸಂಕಲನವಾಗಿದೆ. ಈ ಕೃತಿಯು ನಾಡೋಜ ಮಹೇಶ ಜೋಶಿ ಅವರ ಪ್ರಧಾನ ಸಂಪಾದಕತ್ವದಲ್ಲಿ ಹಾಗೂ ಲಿಂಗಯ್ಯ ಬಿ. ಹಿರೇಮಠ ಅವರ ಸಂಪಾದನೆಯಲ್ಲಿ ಹಾವೇರಿಯಲ್ಲಿ ನಡೆದ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂದರ್ಭದಲ್ಲಿ ಬಿಡುಗಡೆಗೊಂಡಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕು ಹಲವಾರು ಆಕರ್ಷಕ ಪ್ರವಾಸಿ ತಾಣಗಳನ್ನು ಒಳಗೊಂಡಿದ್ದು, ಗಮನಾರ್ಹ ವ್ಯಕ್ತಿಗಳ ವಿಚಾರಧಾರೆಯನ್ನು ಈ ಕೃತಿ ನೀಡುತ್ತದೆ.