ಮರಾಠಿ ಚಿಂತಕ ವಿಕಾಸ್ ಪಾಟೀಲ್ ಅವರ ಕಾದಂಬರಿಯನ್ನು ಲೇಖಕ ಚಂದ್ರಕಾಂತ ಪೋಕಳೆ ಅವರು ‘ಶೋಷಣೆ’ ಶೀರ್ಷಿಕೆಯಡಿ ಕನ್ನಡಕ್ಕೆ ಅನುವಾದಿಸಿದ್ದಾರೆ. ಮುಂಬೈ ಜವಳಿ ಮಾರುಕಟ್ಟೆಯಲ್ಲಿ ತಾಂಡವವಾಡುತ್ತಿರುವ ಶೋಷಣೆಯನ್ನು , ದಬ್ಕಬಾಳಿಕೆಯ ಸ್ವರೂಪವನ್ನು ವಸ್ತುವಾಗಿಸಿಕೊಂಡು ಚಿತ್ರಿಸಲಾಗಿದೆ. ಬಂಡವಾಳಶಾಹಿ-ಕಾರ್ಮಿಕ ವರ್ಗದ ಸಂಘರ್ಷದ ಸ್ಪಷ್ಟ ಚಿತ್ರಣ ನೀಡುತ್ತದೆ.
ಲೇಖಕರು, ಪ್ರಖ್ಯಾತ ಅನುವಾದಕರೂ ಆದ ಚಂದ್ರಕಾಂತ ಪೊಕಳೆ ಅವರು 20-08-1949 ರಂದು ಜನಿಸಿದರು. ಹುಟ್ಟೂರು ಉತ್ತರ ಕನ್ನಡ ಜಿಲ್ಲೆಯ ಮಂಚಿಕೇರಿ. ತಂದೆ- ಮಹಾಬಲೇಶ್ವರ, ತಾಯಿ- ಪಾರ್ವತಿ. ಹೈಸ್ಕೂಲುವರೆಗೆ ಮಂಚಿಕೇರಿಯಲ್ಲಿ ಓದಿದ ಅವರು, ಧಾರವಾಡದ ಕಾಲೇಜಿನಿಂದ ಬಿ.ಎ ಪದವಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿಗಳಿಸಿದ್ದಾರೆ. ಧಾರವಾಡದಲ್ಲಿ ವಿದ್ಯಾರ್ಥಿಯಾಗಿದ್ದಾಗಲೇ ಗೌರೀಶ ಕಾಯ್ಕಿಣಿ, ಶಂಬಾ, ಬೇಂದ್ರೆ, ಇವರುಗಳ ಸಾಹಿತ್ಯದಿಂದ ಪ್ರೇರಿತರಾದ ಪೊಕಳೆ, ಅಧ್ಯಾಪಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೇಡಕಿಹಾಳದ ಲಠ್ಠೆ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿ ಆರಂಭಿಸಿದ ಅವರು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ...
READ MORE