ಶ್ರೀ ಕೃಷ್ಣದೇವರಾಯ

Author : ಸು. ರುದ್ರಮೂರ್ತಿ ಶಾಸ್ತ್ರಿ

Pages 600

₹ 650.00




Year of Publication: 2024
Published by: ಅಂಕಿತ ಪುಸ್ತಕ
Address: #53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004.
Phone: 080 - 2661 7100 / 2661 7755

Synopsys

‘ಶ್ರೀ ಕೃಷ್ಣದೇವರಾಯ’ ಕಾದಂಬರಿಯನ್ನು ಸು.ರುದ್ರಮೂರ್ತಿ ಶಾಸ್ತ್ರಿಯಮವರು ರಚಿಸಿದ್ದಾರೆ. ಇ‌ಲ್ಲಿ ಮರೆಯಲಾಗದ ಸಾಮ್ರಾಜ್ಯದ ಮಹಾಸಾಮ್ರಾಟ ಕೃಷ್ಣದೇವರಾಯನ ಆಳ್ವಿಕೆಯ ವಿವರಗಳನ್ನು ಬರೆದಿದ್ದಾರೆ. ಇಲ್ಲಿ ಲೇಖಕ ಶ್ರೀಕೃಷ್ಣದೇವರಾಯನ ಚರಿತ್ರೆಯನ್ನು ನಿರೂಪಿಸುವುದಕ್ಕಿಂತಲೂ ಆತನ ಚಾರಿತ್ರ್ಯವನ್ನು ನಿರೂಪಿಸುವುದರತ್ತ ಹೆಚ್ಚು ಗಮನಹರಿಸಿದ್ದಾರೆ. ಶ್ರೀಕೃಷ್ಣದೇವರಾಯ ಈ ಕಾದಂಬರಿಯ ಪ್ರಧಾನ ಪಾತ್ರ. ಆದರೆ ಎಲ್ಲ ಪಾತ್ರಗಳ ಒಳಹೊರ ಚಾರಿತ್ರ್ಯಗಳನ್ನು ಗಮನಿಸಿ ಎಲ್ಲ ಪಾತ್ರಗಳನ್ನೂ ನಮ್ಮ ಮುಂದಿರಿಸಿದ್ದಾರೆ. ಬಹುಶಃ ಈ ಕಾರಣದಿಂದ ಶ್ರೀಕೃಷ್ಣದೇವರಾಯನ ಬದುಕಿನ ಸುತ್ತ ಹೆಣೆದುಕೊಂಡಿರುವ ಹಲವಾರು ಅಸಂಗತಗಳು ತಮ್ಮಷ್ಟಕ್ಕೆ ತಾವೇ ಕಳಚಿಕೊಂಡಿವ ಒಬ್ಬ ಸಾಧಾರಣ ಓದುಗ ಬಯಸುವ, ಒಂದು ಕಥೆಗೆ ಬೇಕಾದ ಮಾನವ ಸಹಜ ಶೃಂಗಾರ ಭಾವಗಳು ನವಿರಾಗಿ ಮೂಡಿಬಂದಿವೆ. ಮನುಷ್ಯನಿಗೆ ಮುಖ್ಯವಾಗಿ 'ಉತ್ಸಾಹ' ಸ್ಥಾಯೀಭಾವವಾಗಿದ್ದರೆ ಅವನು ಆರೋಗ್ಯಪೂರ್ಣನಾಗಿರುತ್ತಾನೆ. ಶೃಂಗಾರ ವೀರ, ಕರುಣ ಮುಂತಾದ ರಸಗಳು ಮಾನವನಿಗೆ ಸಹಜ. ಆ ಕಾಲದ ಆಂತರಂಗಿಕ ಗೂಢಚರ್ಯೆ, ಅಧಿಕಾರ ದಾಹದ ಪಿತೂರಿಗಳು, ಉಪಾಯಗಳಿಗೆ ಪ್ರತ್ಯುಪಾಯಗಳು ಮುಂತಾದ ಕುತೂಹಲ ಮೂಡಿಸುವ ಪ್ರಸಂಗಗಳೂ ಈ ಕಾದಂಬರಿಯಲ್ಲಿ ಹಿತವಾಗಿ ಮೂಡಿಬಂದಿವೆ. ಇವೆಲ್ಲವೂ ಆ ಪಾತ್ರಗಳ ವ್ಯಕ್ತಿತ್ವವನ್ನು ಆವಿಷ್ಕರಿಸುವಲ್ಲಿ ಸಹಕಾರಿಯಾಗಿವೆ.

About the Author

ಸು. ರುದ್ರಮೂರ್ತಿ ಶಾಸ್ತ್ರಿ
(11 November 1948)

ಲೇಖಕ ರುದ್ರಮೂರ್ತಿ ಶಾಸ್ತ್ರಿ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಗ್ಗನಹಳ್ಳಿಯವರು. ತಂದೆ-ಎಸ್.ಎನ್. ಶಿವರುದ್ರಯ್ಯ, ತಾಯಿ- ಸಿದ್ಧಗಂಗಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟೂರಿನಲ್ಲಿ , ಪ್ರೌಢಶಾಲೆಯನ್ನು ರಾಮನಗರದಲ್ಲಿ ಪೂರ್ಣಗೊಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವೀಧರರು. ಬೆಂಗಳೂರಿನ ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಂತರ ವೃತ್ತಿಗೆ ರಾಜೀನಾಮೆ ನೀಡಿ ಸಾಹಿತ್ಯ ಸೇವೆಯಲ್ಲಿ ತೋಡಗಿ, ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ‘ಭಾವ ಲಹರಿ’, ಪರಿ, ಅಂತರಂಗ-ಬಹಿರಂಗ, ಚಿತ್ರಕಲ್ಪನೆ, ರಾಗ, ನಾಡಗೀತೆಗಳು, ನಾದರೂಪಕ ಕವನ ಸಂಕಲನಗಳು. ಪ್ರಾಸ-ಪ್ರಯಾಸ, ಕೆಂಪಭಾರತಂ, ಕೆಂಪರಾಮಾಯಣಂ, ಕೆಂಪನ ವಚನಗಳು, ಅಲ್ಪಜ್ಞನ ವಚನಗಳು ಮುಂತಾದ ಹಾಸ್ಯ ಸಂಕಲನಗಳು ಸೇರಿ ಸುಮಾರು ...

READ MORE

Related Books