ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರು ಶ್ರೀ ರಾಮಕೃಷ್ಣ ಅವರ ಜೀವನ ಹಾಗೂ ಅಧ್ಯಾತ್ಮಿಕ ಸಾಧನೆ ಕುರಿತು ಬರೆದ ಕೃತಿ-ಶ್ರೀ ರಾಮಕೃಷ್ಣ. ಇವರ ಬಗ್ಗೆ ಈಗಾಗಲೇ ಹಲವು ಗ್ರಂಥಗಳು ಬಂದಿವೆಯಾದರೂ ಅವರ ಜೀವನ ಸಂಘ಼ರ್ಷಗಳೊಡನೆ ಸಾಧಿಸಿದ ಅಧ್ಯಾತ್ಮಿಕ ತಿರುವುಗಳನ್ನು ವಿಶ್ಲೇಷಿಸಿ ಬರೆದ ಚಿಂತನಗಳಾಗಿವೆ. ಜೀವನಕ್ಕೆ ಸಂಬಂಧಿಸಿದ ಕೆಲ ಮುಖ್ಯ ಸಂಗತಿಗಳನ್ನು ವಿಶ್ಲೇಷಿಸಲಾಗಿದೆ. ಇಲ್ಲಿ ಲೇಖಕರ ವಿಶಿಷ್ಟ ದೃಷ್ಟಿಕೋನವನ್ನು ಕಾಣಬಹುದು.
‘ಶ್ರೀನಿವಾಸ’ ಕಾವ್ಯನಾಮದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರು ಕನ್ನಡ ಸಣ್ಣಕತೆಗಳ ರಚನೆಗೆ ಖಚಿತ ರೂಪ ನೀಡುವುದಕ್ಕೆ ಕಾರಣರಾದ ಆದ್ಯರು. ಕೋಲಾರದ ಮಾಲೂರಿನ ಮಾಸ್ತಿ ಗ್ರಾಮದಲ್ಲಿ 1891ರ ಜೂನ್ 8ರಂದು ಜನಿಸಿದರು. ತಂದೆ ರಾಮಸ್ವಾಮಿ ಅಯ್ಯಂಗಾರ್ ತಾಯಿ ತಿರುಮಲ್ಲಮ್ಮ. ಪ್ರೌಢವಿದ್ಯಾಭ್ಯಾಸವನ್ನು ಮೈಸೂರಿನ ವೆಸ್ಲಿಯನ್ ಹೈಸ್ಕೂಲಿನಲ್ಲೂ, ಎಫ್.ಎ. ಅನ್ನು ಮಹಾರಾಜ ಕಾಲೇಜಿನಲ್ಲೂ ಮುಗಿಸಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ ಮುಗಿಸಿ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಎಂಎ ಪದವಿ (1914) ಪಡೆದರು. ಮೈಸೂರು ಸರ್ಕಾರದ ಅಸಿಸ್ಟೆಂಟ್ ಕಮೀಷನರ್ (1914) ಆಗಿ ಕೆಲಸಕ್ಕೆ ಸೇರಿದರು. ಸರ್ ಎಂ. ವಿಶ್ವೇಶ್ವರಯ್ಯನವರ ಕೈಕೆಳಗೆ ಕೆಲಸ ಮಾಡಿದ ...
READ MORE