‘ಶ್ರೀ ಸ್ವಾಮಿ ವಿವೇಕಾನಂದರ ಸಮಗ್ರ ಕೃತಿಸಾರ ಸಂಗ್ರಹ ’ ಕೃತಿಯು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಾವೇರಿಯಲ್ಲಿ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆಗೊಂಡ ಕೃತಿಯಾಗಿದೆ. ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಸರಳವಾಗಿ, ಸಮಗ್ರವಾಗಿ ಹಿಡಿದಿಟ್ಟಿರುವ ಈ ಕೃತಿಯು ಓದುಗರಿಗೆ ಹಲವಾರು ವಿಚಾರಗಳನ್ನು ತಿಳಿಸುತ್ತದೆ. ವಿವೇಕಾನಂದರ ಬದುಕಿನ ರೀತಿ ಅವರ ತತ್ವಗಳು ಹಾಗೂ ಸಾಧನೆಯ ಕಡೆಗೆ ನಡೆದು ಬಂದ ಜೀವನಾಕ್ರಮವನ್ನು ನಾವು ಇಲ್ಲಿ ಕಾಣಬಹುದಾಗಿದೆ.
ನ್ಯಾಯಾಧೀಶರಾಗಿ, ಸಾಹಿತಿಗಳಾಗಿ, ಚಳುವಳಿಕಾರರಾಗಿ ನಾಡುನುಡಿಗೆ ಸೇವೆ ಸಲ್ಲಿಸಿರುವ ಕೋ. ಚೆನ್ನಬಸಪ್ಪ ಅವರು ಬಳ್ಳಾರಿ ಜಿಲ್ಲೆಯವರು. ತಾಯಿ ಬಸಮ್ಮ- ತಂದೆ ವೀರಣ್ಣ. 1922ರ ಫೆಬ್ರುವರಿ 27ರಂದು ಜನಿಸಿದರು. ಕಾಲೇಜು ಶಿಕ್ಷಣವನ್ನು ಅನಂತಪುರದಲ್ಲಿ ಪಡೆಯುತ್ತಿದ್ದಾಗ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ ಶಾಲೆಗೆ ತಿಲಾಂಜಲಿಯಿತ್ತರು. ಅನಂತರ ವಿದ್ಯಾಭ್ಯಾಸ ಮುಂದುವರಿಸಿ ಬಿ.ಎ. ಮತ್ತು ಲಾ ಪದವಿಯನ್ನೂ ಹಾಗೂ ಎಂ.ಎ. ಪದವಿಯನ್ನೂ ಗಳಿಸಿದರು. 1946ರಲ್ಲಿ ಬಳ್ಳಾರಿ ಜಿಲ್ಲೆಯ ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ವಕೀಲರಾಗಿ ವೃತ್ತಿಜೀವನ ಪ್ರಾರಂಭಿಸಿದ ಇವರು 1965ರಲ್ಲಿ ಡಿಸ್ಟ್ರಿಕ್ಟ್ ಸೆಷನ್ ಜಡ್ಜ್ ಆಗಿ ಅಮೂಲ್ಯ ಸೇವೆಸಲ್ಲಿಸಿದರು. ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಾಜಮುಖಿ ಸೇವೆ ...
READ MORE