ದಾಸ ಸಾಹಿತ್ಯದ ಅಶ್ವಿನಿ ದೇವತೆ ಎಂಬ ಬಿರುದಿಗೆ ಪಾತ್ರರಾದ ಕನಕದಾಸರು. ಮೂಢ ಧರ್ಮವನ್ನೇ ಜೀವನ ಆಚರಣೆಯನ್ನಾಗಿಸಿಕೊಂಡಿದ್ದ ಜನಸಾಮಾನ್ಯರನ್ನು ಕನಕದಾಸರು ನೈಜ ದೇವರ ಸ್ವರೂಪವನ್ನು ಸರಳವಾಗಿ ತಿಳಿಸಿ ಅರಿವು ಮೂಡಿಸಿದರು. ಮೌಢ್ಯತೆಯನ್ನು ಪ್ರಬಲವಾಗಿ ಖಂಡಿಸಿದರು. ಈ ಮಹಾನ್ ಸಂತನ ಜೀವನ ಚರಿತ್ರೆ ಹಾಗೂ ದಾಸ ಕೀರ್ತನೆಯ ಚಿಂತನೆಯನ್ನು ಈ ಕೃತಿಯಲ್ಲಿ ಸವಿವರವಾಗಿ ತಿಳಿಸಿದ್ದಾರೆ ಬಸವರಾಜ ನಾಯ್ಕರ.
ಡಾ. ಬಸವರಾಜ ನಾಯ್ಕರ್ ಅವರು ಮೂಲತಃ ಗದಗ (ಜನನ: 01-08-1949) ಜಿಲ್ಲೆಯ ನರಗುಂದದವರು. ತಂದೆ ಶಿವಶಂಕರಪ್ಪ ನಾಯ್ಕರ, ಧಾರವಾಡದಲ್ಲಿ ಪ್ರಾಥಮಿಕ ಶಿಕ್ಷಣ, ನರಗುಂದದಲ್ಲಿ ಪ್ರೌಢಶಿಕ್ಷಣ ಮತ್ತೇ ಧಾರವಾಡದಲ್ಲಿ ಪಿಯುಸಿಯಿಂದ ಕರ್ನಾಟಕ ವಿ.ವಿಯಲ್ಲಿ ಸ್ನಾತಕೋತ್ತರ ಪದವಿ (ಎಂ.ಎ-ಇಂಗ್ಲಿಷ್) ಹಾಗೂ ಕ್ಯಾಲಿಫೋರ್ನಿಯಾದಿಂದ ಡಿ.ಲಿಟ್ ಪದವೀಧರರು. ಗುಲಬರ್ಗಾ ವಿ.ವಿಯಲ್ಲಿ ಸಂಶೋಧನಾ ಸಹಾಯಕರಾಗಿ ವೃತ್ತಿ ಜೀವನ ಆರಂಭಿಸಿ ಅಲ್ಲಿಯೇ ಉಪನ್ಯಾಸಕರಾಗಿ ರೀಡರ್ ಆಗಿ ನಂತರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರೀಡರ್, ಪ್ರೊಫೆಸರ್, ಪ್ರೊಫೆಸರ್ ಎಮಿರಿಟಿಸ್ ಆಗಿ (2011-12) ನಿವೃತ್ತಿಯಾದರು. ಅನುವಾದಿತ ಕೃತಿಗಳು: ಪಡುವಣ ನಾಡಿನ ಪ್ರೇಮವೀರ- 1975, ಜೋಗೀಭಾವಿ-1976, ಕೊಳ್ಳದ ನೆರಳು-1978, ಹುಚ್ಚುಹೊಳೆ-1980, ನಿಗೂಢ ಸೌಧ (11 ಫ್ರೆಂಚ್ ಕಥೆಗಳ ಅನುವಾದ)-1982, ಗೋವರ್ಧನರಾಮ-1984, ಭಾರತೀಯ ಇಂಗ್ಲೀಷ್ ಸಾಹಿತ್ಯ ಚರಿತ್ರೆ-2006, ಕೆಂಪು ...
READ MORE