ಡಾ. ಕೆ.ಎಸ್. ಪವಿತ್ರ ಅವರು ರಚಿಸಿದ ಕೃತಿ-ಸೌಂದರ್ಯ ಪ್ರಜ್ಞೆ ಮತ್ತು ವ್ಯಕ್ತಿತ್ವ ವಿಕಾಸ. ಸೌಂದರ್ಯವು ಹೊರಗೆಲ್ಲೂ ಇರದೇ ವ್ಯಕ್ತಿಯ ಅಂತರಂಗದಲ್ಲಿರುತ್ತದೆ. ಆತನು ನೋಡುವ ದೃಷ್ಟಿಯನ್ನು ಅವಲಂಬಿಸಿರುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ, ವ್ಯಕ್ತಿಯ ವ್ಯಕ್ತಿತ್ವವೂ ಇಲ್ಲಿ ಬಹು ಮುಖ್ಯ ಕಾರಣವಾಗುತ್ತದೆ. ಇಂತಹ ಅಂಶಗಳ ಕುರಿತು ನಡೆಸಿದ ಜಿಜ್ಞಾಸೆಯ ಕೃತಿ ಇದು. ಡಾ. ಸಿ.ಆರ್. ಚಂದ್ರಶೇಖರ ಕೃತಿಯ ಸಂಪಾದಕರು.
ವೈದ್ಯಕೀಯ ಸಾಹಿತ್ಯ ರಂಗ, ಭರತನಾಟ್ಯ ಕಲಾವಿದೆಯಾಗಿ ಹೆಸರು ಗಳಿಸಿರುವ ಪವಿತ್ರಾ ಕೆ.ಎಸ್ ಅವರು ಮೂಲತಃ ಶಿವಮೊಗ್ಗದವರು. ಆರೋಗ್ಯ ಸಲಹೆಗಳಿಂದ ಉನ್ನತ ಸ್ಥಾನ ಗಳಿಸಿರುವ ಅವರು ವಿಚಾರ ಸಾಹಿತ್ಯದಲ್ಲೂ ಆಸಕ್ತರು. 11ನೇ ವಯಸ್ಸಿನಲ್ಲಿ ಅಖಿಲ ಭಾರತ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಉಪಾಧ್ಯಕ್ಷೆಯಾಗಿದ್ದ ಕೀರ್ತಿ ಅವರದು. ’ಮನ-ಮನನ, ನೀವು ಮತ್ತು ನಿಮ್ಮ ಸಂಬಂಧಗಳು, ಸಿ.ಜಿ.ಯೂಂಗ್, ಓ ಸಖಿ ನೀನು ಸಖಿಯೆ, ಪರಿಪೂರ್ಣ ವ್ಯಕ್ತಿತ್ವ ಇಂದಿನ ಮಹಿಳೆಯ ಮಾನಸಿಕ ಸವಾಲುಗಳು, ಗೀಳು ಖಾಯಿಲೆ, ಮಗು-ಮನಸು’ ಅವರ ಕೃತಿಗಳು. ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಬಹುಮಾನ, ಕಸಾಪ ಧರಣೇಂದ್ರಯ್ಯ ಮನೋವಿಜ್ಞಾನ ದತ್ತಿ ...
READ MORE