ಶಿಕ್ಷಣ, ಸಾಹಿತ್ಯ, ಕ್ರೀಡೆ, ರಾಜಕೀಯ - ಹೀಗೆ ಎಲ್ಲ ಕಡೆ ಕಣ್ಣಿಗೆ ರಾಚುವಂತಿರುವ, ಸ್ನೇಹ ಸಂಬಂಧವನ್ನು ಹಾಳುಗೆಡಹುವ ಈ ಸ್ಪರ್ಧೆಗಳು ಬೇಕೆ? ಸ್ಪರ್ಧೆಗಳು ಆರೋಗ್ಯಕರವಾಗಿದ್ದರಷ್ಟೇ ಚೆನ್ನ ಎನ್ನುವ ಲೇಖಕರು ಸ್ಪರ್ಧೆ ಹಾಗೂ ಸಹಕಾರದ ನಡುವಿನ ವ್ಯತ್ಯಾಸ, ನಾವು ಅರ್ಥ ಮಾಡಿಕೊಳ್ಳಬೇಕಾದ ಪರಿಯನ್ನು ಪರಿಚಯಿಸಿದ್ದಾರೆ. ಈ ಕುರಿತು ಸ್ಪರ್ಧಾತ್ಮಕತೆಯ ಮನೋವೈಜ್ಞಾನಿಕ ಅಂತರಂಗ ಪುಸ್ತಕ ವಿವರಿಸುತ್ತದೆ.
ಮಹಾಬಲೇಶ್ವರ ರಾವ್ ಅವರು 1952ರಲ್ಲಿ ಉಡುಪಿ ಜಿಲ್ಲೆಯ ಮಣೂರಿನಲ್ಲಿ ಜನಿಸಿದರು. ಎಂ.ಎ., ಎಂ.ಎಡ್ ಮತ್ತು ಪಿಎಚ್.ಡಿ. ಪದವೀಧರರಾದ ಅವರು ಆರು ವರ್ಷ ಪ್ರೌಢಶಾಲಾ ಕನ್ನಡ ಶಿಕ್ಷಕರಾಗಿ, ಮೂರು ವರ್ಷ ಆಕಾಶವಾಣಿಯ ಭದ್ರಾವತಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪ್ರಸಾರಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಹಾಬಲೇಶ್ವರ ರಾವ್ ಕಳೆದ ನಾಲ್ಕು ದಶಕಗಳಿಂದ ಕನ್ನಡ ಭಾಷಾ ಬೋಧನೆ, ಬರವಣಿಗೆ, ಭಾಷಣ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಲೇಖಕರಾಗಿ, ಅನುವಾದಕರಾಗಿ, ಅಂಕಣಕಾರರಾಗಿ ತಮ್ಮದೇ ಛಾಪು ಮೂಡಿಸಿರುವ ಅವರು 14ವರ್ಷ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ. ’ಉದಯವಾಣಿ’, ’ಪ್ರಜಾವಾಣಿ’, ’ತರಂಗ’, ’ಹೊಸತು’ ಮೊದಲಾದ ಕನಡ ದಿನಪತ್ರಿಕೆ, ಮ್ಯಾಗಸೈನ್‌ಗಳಲ್ಲಿ ಅವರ ನೂರಾರು ಲೇಖನಗಳನ್ನು ಪ್ರಕಟಣೆ ಕಂಡಿವೆ. ...
READ MORE