ಪ್ರೊ. ಭಾಲಚಂದ್ರ ಜಯಶೆಟ್ಟಿ ಅವರ ಸಮಗ್ರ ಸಾಹಿತ್ಯದ ಮೂರನೆಯ ಸಂಪುಟ ಇದಾಗಿದ್ದು ‘ನಮ್ಮ ಮನೆ, ಆನು ದೇವಾ ಒಳಗಣವನು, ಯುಗಾಂತ, ಅಂಗುಲಿಮಾಲ ಮತ್ತು ಅಮ್ಮಾವ್ರ ಗಂಡ’ ಕೃತಿಗಳ ಸಂಗ್ರಹ ರೂಪ ‘ಸೃಜನ’. ವೈಚಾರಿಕ ಬರೆಹ, ಲಲಿತ ಪ್ರಬಂಧಗಳು, ಕತೆ ಮುಂತಾದ ಪ್ರಕಾರಗಳು ಓದುಗರನ್ನು ಆಪ್ತವಾಗಿಸುತ್ತದೆ.
ಲೇಖಕ, ಅನುವಾದಕ ಭಾಲಚಂದ್ರ ಜಯಶೆಟ್ಟಿ ಅವರು ಮೂಲತಃ ಬೀದರ ಜಿಲ್ಲೆಯವರು. ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ರಾಜೇಶ್ವರದಲ್ಲಿ ಜನಿಸಿದ ಅವರು ಪ್ರಾಥಮಿಕ ಶಿಕ್ಷಣವನ್ನು ರಾಜೇಶ್ವರ, ಬಸವಕಲ್ಯಾಣದಲ್ಲಿ ಪಡೆದರು. ಆನಂತರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಥಮ ಶ್ರೇಣಿಯಲ್ಲಿ ಎಂ.ಎ ಪದವಿ ಪಡೆದರು. ಕನ್ನಡ, ಹಿಂದಿ, ಮರಾಠಿ ಭಾಷೆಗಳಲ್ಲಿ ಪ್ರಭುತ್ವ ಪಡೆದಿದ್ದ ಅವರು ಶಿಕ್ಷಣ ಇಲಾಖೆಯಲ್ಲಿ ವೃತ್ತಿಯನ್ನು ಆರಂಭಿಸಿದರು. ಸರಕಾರಿ ಪದವಿ ಮಹಾವಿದ್ಯಾಲಯ ಯಾದಗಿರಿ, ಸರಕಾರಿ ಮಹಾವಿದ್ಯಾಲಯ ಗುಲಬರ್ಗಾ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೀದರ ಮುಂತಾದೆಡೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 1997ರಲ್ಲಿ ನಿವೃತ್ತಿಯಾದರು. ಹಲವಾರು ಶಿಕ್ಷಣ ಸಂಸ್ಥೆಗಳ ...
READ MORE