ಸ್ತ್ರೀಮತವನುತ್ತರಿಸಲಾಗದೆ?

Author : ಎಂ.ಎಸ್. ಆಶಾದೇವಿ

Pages 144

₹ 90.00




Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಕರ್ನಾಟಕ 577417

Synopsys

`ಸ್ತ್ರೀಮತವನುತ್ತರಿಸಲಾಗದೆ?’ ಕೃತಿಯು ಎಂ.ಎಸ್. ಆಶಾದೇವಿ ಅವರ ಸಾಹಿತ್ಯ - ಸಂಸ್ಕೃತಿ ಕುರಿತ ಲೇಖನಗಳ ಸಂಕಲನವಾಗಿದೆ. ಈ ಕೃತಿಗೆ ಬೆನ್ನುಡಿ ಬರೆದಿರುವ ಯು. ಆರ್. ಅನಂತಮೂರ್ತಿ ಅವರು, ಬಸವಣ್ಣನ ಬಗ್ಗೆ ಹೀಗೇ ಹಲವು ಈಚಿನ-ಹಿಂದಿನ ಲೇಖಕರ ಬಗ್ಗೆ ನಮ್ಮನ್ನು ಕೆಣಕುವಂತೆ, ಒಪ್ಪುವಂತೆ, ಅನುಮಾನಿಸುವಂತೆ ವಿಮರ್ಶೆಯ ವಿನಯದಲ್ಲಿ ಆಶಾದೇವಿ ಬರೆದಿದ್ದಾರೆ. ಎಲ್ಲಾ ಕೃತಿಗಳಲ್ಲೂ ಇರುವ ವಾಚ್ಯಾರ್ಥಗಳು ನಿವೃತ್ತವಾಗಿ ನಮಗವು ಧ್ವನಿಸುತ್ತವೆ ಎಂದು ಸುಲಭವಾಗಿ ನಾವು ತಿಳಿದಿರುತ್ತೇವೆ. ಆಶಾದೇವಿಯವರು ಕೃತಿಯ ಈ ವಾಚ್ಯದ ಮುಖವನ್ನು ನೋಡುತ್ತಾರೆ; ಆದರೆ ಈ ವಾಚ್ಯ ಮಾತ್ರ ಮುಖ್ಯವೆನ್ನುವಂತೆ ನೋಡುವುದಿಲ್ಲ. ಕೃತಿಯಿಂದ ಹುಟ್ಟಿದ ರಸಾನುಭವವನ್ನೂ ನಮ್ಮೊಂದಿಗೆ ಹಂಚಿಕೊಳ್ಳುತ್ತ – ಸಂಭ್ರಮಿಸದಂತೆ ಅನುಮಾನಿಸುತ್ತ ಪ್ರಶ್ನಿಸುತ್ತ – ನೋಡುತ್ತಾರೆ. ಇದು ಕಷ್ಟದ ಸಾಹಸದ ಓದು; ಕೃತಿ ಪೂರ್ಣವಾಗಿ ನಮಗೆ ಒದಗುವಂತೆ ಮಾಡುವ ಓದು ಇದು. ಪ್ರಾಮಾಣಿಕತೆ, ಧೀಮಂತಿಕೆಗಳ ಜೊತೆ ಕೃತಿಗೆ ಎದುರಾಗುವ ಧೈರ್ಯವೂ ಈ ಬಗೆಯ ವಿಮರ್ಶೆಗೆ ಅಗತ್ಯ. ಈ ದಿನಗಳಲ್ಲಿ ಕನ್ನಡ ಸಾಹಿತ್ಯ ಜೀವಂತವಾಗಿದೆ ಎನ್ನಿಸುವಂತೆ ಮಾಡಿರುವ ಆಶಾದೇವಿಗೆ ನಾವು ಕೃತಜ್ಞರು ಎಂದಿದ್ದಾರೆ.

About the Author

ಎಂ.ಎಸ್. ಆಶಾದೇವಿ
(26 February 1966)

ಅನುವಾದಕಿ, ವಿಮರ್ಶಕಿ ಆಶಾದೇವಿ ಅವರು 1966 ಫೆಬ್ರವರಿ 26 ದಾವಣಗೆರೆ ಜಿಲ್ಲೆಯ ನೇರಳಿಗೆಯಲ್ಲಿ ಜನಿಸಿದರು. ತಂದೆ ಸೋಮಶೇಖರ್, ತಾಯಿ ಅನಸೂಯಾ. ಚನ್ನಗಿರಿ ಸಮೀಪದ ಹಿರೇಕೋಗಲೂರಿನವರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ. ಡಿ.ಆರ್.ನಾಗರಾಜ್ ಮಾರ್ಗದರ್ಶನದಲ್ಲಿ ನವೋದಯ ವಿಮರ್ಶೆ ಮೇಲೆ ಪಾಶ್ಚಾತ್ಯ ವಿಮರ್ಶೆಯ ಪ್ರಭಾವ ಕುರಿತು ಪಿ.ಎಚ್ಡಿ. ಸ್ತ್ರೀಮತವನುತ್ತರಿಸಲಾಗದೇ(ಸಾಹಿತ್ಯ ಸಂಸ್ಕೃತಿ ಕುರಿತ ಲೇಖನಗಳು) ಉರಿಚಮ್ಮಾಳಿಗೆ(ಡಿ.ಆರ್.ನಾಗರಾಜ ಅವರ ದಿ ಪ್ಲೇಮಿಂಗ್ ಫೀಟ್ ಕೃತಿಯ ಅನುವಾದ). ವಚನ ಪ್ರವೇಶ( ಸಂಪಾದನೆ). ಭಾರತದ ಬಂಗಾರ ಪಿ.ಟಿ.ಉಷಾ, ಇವರ ಪ್ರಮುಖ ಕೃತಿಗಳು. ವಿವಿಧ ಸೆಮಿನಾರುಗಳಲ್ಲಿ ಪ್ರಬಂಧ ಮಂಡನೆ. ಪ್ರಸ್ತುತ ಬೆಂಗಳೂರಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕಿಯಾಗಿ ...

READ MORE

Related Books