‘ಸು. ರಂ. ಎಕ್ಕುಂಡಿಯವರ ಕಾವ್ಯ’ ಕರ್ನಾಟಕ ಸಾಹಿತ್ಯ ಅಕಾಡೆಮಿ ನಡೆಸುವ ವಿಚಾರ ಸಂಕಿರಣಗಳಲ್ಲಿ ಮಂಡಿತವಾದ ಪ್ರಬಂಧಗಳ ಸಂಕಲನ. ವಿಚಾರ ಸಂಕಿರಣ ಮಾಲೆಯಲ್ಲಿ ಅನೇಕ ಉಪಯುಕ್ತ ಕೃತಿಗಳು ಹೊರಬಂದು ಮೌಲಿಕ ವಿಮರ್ಶೆಗೆ ಕಾರಣವಾಗಿದೆ. ಹಿರಿಯ ಕವಿ ಸು.ರಂ. ಎಕ್ಕುಂಡಿಯವರ ಕಾವ್ಯ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಬಂದ ಸಂದರ್ಭದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯು ಅವರ ಕಾವ್ಯದ ಬಗ್ಗೆ ಒಂದು ವಿಚಾರ ಸಂಕಿರಣವನ್ನು ಏರ್ಪಡಿಸುವ ಮೂಲಕ ಗೌರವ ಪ್ರಕಟಿಸಿತು. ಆ ವಿಚಾರ ಸಂಕಿರಣದ ಪ್ರಬಂಧಗಳನ್ನು ಈ ಕೃತಿಯಲ್ಲಿ ದಾಖಲಿಸಲಾಗಿದೆ.
ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರ ಎಕ್ಕುಂಡಿಯವರ ಕಾವ್ಯದಲ್ಲಿ ಪರಂಪರೆಯ ನೋಟ, ಎಂ. ಜಿ. ಚಂದ್ರಶೇಖರಯ್ಯನವರ ಎಕ್ಕುಂಡಿಯವರ ಕಾವ್ಯ ಮತ್ತು ಪ್ರಗತಿಶೀಲ ಸಾಹಿತ್ಯ, ಟಿ.ಪಿ. ಅಶೋಕ ಅವರ ಸು.ರಂ. ಎಕ್ಕುಂಡಿ ಅವರ ಕಥನ ಕವನದ ನೆಲೆಗಳು ಸೇರಿದಂತೆ ಹಿರಿಯ ಲೇಖಕರ ಹಲವು ಮಹತ್ವದ ಪ್ರಬಂಧಗಳಿವೆ.
ಬಂಡಾಯ ಸಾಹಿತ್ಯ ಚಳವಳಿಯ ಪ್ರಮುಖ ಲೇಖಕ ಬರಗೂರು ರಾಮಚಂದ್ರಪ್ಪ ಅವರು ಕತೆ-ಕಾದಂಬರಿ-ಕಾವ್ಯಗಳಂತಹ ಸೃಜನಶೀಲ ಕೃತಿಗಳ ಜೊತೆಗೆ ಚಿಂತನ ಪರ ಬರಹ, ವಿಮರ್ಶೆಗಳ ಮೂಲಕ ಹೆಸರಾದವರು. ರಾಮಚಂದ್ರಪ್ಪ ಅವರು 1946ರ ವರ್ಷದ ಅಕ್ಟೋಬರ್ 18ರಂದು ತುಮಕೂರು ಜಿಲ್ಲೆಯ ಬರಗೂರು ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಕೆಂಚಮ್ಮ, ತಂದೆ ರಂಗದಾಸಪ್ಪ. ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ, ನಿರ್ದೇಶಕ ಆಗಿದ್ದರು. ಸಾಹಿತ್ಯದಷ್ಟೇ ಸಿನಿಮಾವನ್ನು ಗಾಢವಾಗಿ ಪ್ರೀತಿಸುವ ಅವರು ಸಿನಿಮಾದ ಕಮರ್ಷಿಯಲ್ ಸೂತ್ರಗಳಿಗೆ ಜೋತು ಬೀಳದೆ ಅಲ್ಲೂ ವಿಭಿನ್ನ ಹಾದಿ ಹಿಡಿದವರು. ಆಡಳಿಗಾರರಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷತೆ, ಕನ್ನಡ ...
READ MORE