‘ಸುಬ್ಬಾಭಟ್ಟರ ಮಗಳೇ’ ಹಿರಿಯ ಸಾಹಿತಿ ಬಿ.ಆರ್. ಲಕ್ಷ್ಮಣರಾವ್ ಅವರ ಭಾವಗೀತೆಗಳ ಸಂಕಲನ. ಈ ಕೃತಿ ಐದು ಮುದ್ರಣಗಳನ್ನು ಕಂಡಿದೆ. ಭಾವಗೀತೆ ಆಧುನಿಕ ಕಾವ್ಯ ಸಂದರ್ಭದಲ್ಲಿ ರೂಪುಗೊಂಡ ಪ್ರಕಾರ, ಲಿರಿಕ್ ಗೆ ಸಂವಾದಿಯಾದಂಥದು. ಭಾವಗೀತೆಯ ಎಳೆಗಳನ್ನು ಕನ್ನಡ ಸಾಹಿತ್ಯ ಪರಂಪರೆಯಲ್ಲಿಯೂ ಇದೆ. ವಚನಸಾಹಿತ್ಯ ಹಾಗೂ ಕೀರ್ತನಸಾಹಿತ್ಯದಲ್ಲಿ ಭಾವಗೀತೆಗೆ ಅತ್ಯುತ್ತಮ ನಿದರ್ಶನಗಳಿವೆ. ಈ ದೇಸಿ ಪರಂಪರೆಯ ಮುಂದುವರಿಕೆಯಾಗಿ ಈ ಕೃತಿ ಪ್ರಕಟವಾಗಿದೆ. ಇಲ್ಲಿ ವಿಭಿನ್ನ ಶೈಲಿಯ ಭಾವಗೀತೆಗಳು ಸಂಕಲನಗೊಂಡಿವೆ.
ಕವಿ, ಕತೆಗಾರ, ವಿಮರ್ಶಕ ಹಾಗೂ ಚಲನಚಿತ್ರಕಾರ ಬಿ.ಆರ್. ಲಕ್ಷ್ಮಣರಾವ್ ಅವರು 1946 ಸೆಪ್ಟೆಂಬರ್ 9ರಂದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಗಟ್ಟ ತಾಲ್ಲೂಕಿನ ಚೀಮಂಗಲದಲ್ಲಿ ಜನಿಸಿದರು. ತಂದೆ ರಾಜಾರಾವ್. ತಾಯಿ ವೆಂಕಟಲಕ್ಷ್ಮಮ್ಮ. ಚಿಂತಾಮಣಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪದವಿ ಹಾಗೂ ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು. ಚಿಂತಾಮಣಿಯ ಪ್ರೌಢಶಾಲೆ ಉಪಾಧ್ಯಾಯರಾಗಿ ವೃತ್ತಿ ಆರಂಭಿಸಿದ ಇವರು ವಿನಾಯಕ ಟುಟೋರಿಯಲ್ಸ್‌ನ ಪ್ರಿನ್ಸಿಪಾಲರಾಗಿ ಕಾರ್ಯನಿರ್ವಹಿಸಿ ಪ್ರಸ್ತುತ ಸಂಪೂರ್ಣವಾಗಿ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರು ಬರೆದ ಪ್ರಮುಖ ಕೃತಿಗಳೆಂದರೆ ಲಿಲ್ಲಿ ಪುಟ್ಟಿಯ ಹಂಬಲ, ಶಾಂಗ್ರಿ-ಲಾ, ಅಪರಾಧಂಗಳ ಮನ್ನಿಸೊ, ಗೋಪಿ ಮತ್ತು ...
READ MORE