ನೇತಾಜಿ ಸುಭಾಷ್ ಚಂದ್ರಬೋಸ್ ಭಾರತದ ಯುವತಲೆಮಾರಿಗೆ ಸ್ಫೂರ್ತಿಯಾಗಿರುವ ಸ್ವಾತಂತ್ಯ್ರ ಹೋರಾಟಗಾರರು. ’ನನಗೆ ಸ್ವಲ್ಪ ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯವನ್ನು ತಂದುಕೊಡುತ್ತೇನೆ' ಇವರ ಹೇಳಿಕೆಗೆ ಹೂಗುಟ್ಟು ಸ್ವಾತಂತ್ಯ್ರಕ್ಕಾಗಿ ಸಾವಿರಾರು ಯುವಜನರು ಪಣತೊಟ್ಟರು. ಬ್ರಿಟಿಷರನ್ನು ಭಾರತದಿಂದ ಹೊಡೆದೋಡಿಸಬೇಕೆಂಬ ಪಣತೊಟ್ಟು ಭಾರತೀಯ ರಾಷ್ಟ್ರೀಯ ಸೇನೆಯನ್ನು ಕಟ್ಟಿ ದಿಟ್ಟತನದಿಂದ ಹೋರಾಡಿದವರು. ಸ್ವಾತಂತ್ರ್ಯ ಹೋರಾಟ ಕಾಲದಲ್ಲಿ ಸೆರೆಮನೆವಾಸ ಅನುಭವಿಸಿದರು. ಇವರ ದಿಟ್ಟ ಹೋರಾಟ, ಬದುಕಿನ ಕುರಿತು ಬೆ.ಗೋ. ರಮೇಶ್ ಅವರು ಈ ಕೃತಿಯಲ್ಲಿ ಕಟ್ಟಿಕೊಟ್ಟಿದ್ದಾರೆ.
ಬೆ.ಗೋ. ರಮೇಶ್ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ದೊಡ್ಡ ಹನಸಗೆಯಲ್ಲಿ ಆಗಸ್ಟ್ 22 , 1945ರಲ್ಲಿ ಜನಿಸಿದರು. ತಂದೆ ಗೊವಿಂದರಾಜು, ತಾಯಿ ರಾಧಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ನಡೆದದ್ದು ಬೆಂಗಳೂರಿನ ಮಲ್ಲೇಶ್ವರಂ ಶಾಲೆಯಲ್ಲಿ. ಇಂಟರ್‌ಮೀಡಿಯೆಟ್ ಓದಿದ್ದು ಸರಕಾರಿ ಕಾಲೇಜಿನಲ್ಲಿ. ಮುಂದೆ ರಮೇಶರು ಹಾಸನದ ಮಲ್ನಾಡ್ ಎಂಜನಿಯರಿಂಗ್ ಕಾಲೇಜಿನಿಂದ ಬಿ.ಇ. ಪದವಿ ಪಡೆದರು. ಹೆಬ್ಬಾಳದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೆಲಕಾಲ ಉದ್ಯೋಗ ನಿರ್ವಹಿಸಿದ ಬೆ. ಗೋ ರಮೇಶರು ಕರ್ನಾಟಕ ಪವರ್ ಕಾರ್ಪೋರೇಷನ್ನಿನಲ್ಲಿ ಸಹಾಯಕ ಎಂಜನಿಯರಾಗಿ, ಸಹಾಯಕ ಎಕ್ಸುಕ್ಯುಟಿವ್ ಎಂಜನಿಯರಾಗಿ, ಎಕ್ಸಿಕ್ಯುಟಿವ್ ಎಂಜನಿಯರಾಗಿ, ರಾಯಚೂರಿನ ಶಾಕೋತ್ಪನ್ನ ವಿದ್ಯುದಾಗಾರದಲ್ಲಿ ಸೇವೆ ಸಲ್ಲಿಸಿ ...
READ MORE