ಮನೋವೈದ್ಯ ಡಾ. ಸಿ.ಆರ್. ಚಂದ್ರಶೇಖರ ಅವರ ಕೃತಿ-ಸುಖೀ ಕುಟುಂಬ ನಿಮ್ಮದಾಗಲಿ. ಸುಖೀ ಕುಟುಂಬ ನಮ್ಮದಾಗಬೇಕಾದರೆ ಎದುರಾದ ಎಲ್ಲ ಸಮಸ್ಯೆ, ನೋವು ಇತ್ಯಾದಿ ಒಪ್ಪಿಕೊಂಡು ಅವುಗಳನ್ನು ಎದುರಿಸುವುದು ಆಗಿದೆ. ಭೀತಿ-ಆತಂಕಕ್ಕೆ ಒಳಗಾಗಿ ತತ್ತರಿಸಿದರೆ ಬದುಕು ಸುಖವಾಗಿರುವುದಿಲ್ಲ. ಇಂತಹ ಸಂಗತಿಗಳ ಬಗ್ಗೆ ಮಾಹಿತಿ ನೀಡುವ ಕೃತಿ ಇದು.
ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...
READ MORE