ಲೇಖಕಿ ಸಾರಾ ಅಬೂಬಕ್ಕರ್ ಅವರು ಬರೆದ ಸಾಮಾಜಿಕ ಕಾದಂಬರಿ-ಸುಳಿ. ಸಾಮಾಜಿಕ-ಧಾರ್ಮಿಕ ನಿಯಮಗಳು ಮನುಷ್ಯನ ಸಹಜ ಜೀವನಕ್ಕೆ ಹೇಗೆ ಅಡ್ಡಿಯಾಗುತ್ತಿವೆ. ಅನಿರೀಕ್ಷಿತ ಸನ್ನಿವೇಶಗಳು ಸೃಷ್ಟಿಯಾಗಿ ಸಾಮಾಜಿಕ ನೆಮ್ಮದಿಯನ್ನು ಹೇಹಗೆ ಹಾಳು ಮಾಡುತ್ತವೆ. ಮಾದಕ ದ್ರವ್ಯಕ್ಕೆ ಬಲಿಯಾಗುವ ಯುವ ಜನತೆ, ರಾಜಕಾರಣ ಎಲ್ಲವನ್ನೂ ಅನಾವರಣಗೊಳಿಸಿದ ಕಥಾ ವಸ್ತುವಿನ ಕಾದಂಬರಿ ಇದು
ಕನ್ನಡದ ಪ್ರಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರು 1936ರ ಜೂನ್ 30ರಂದು ಕಾಸರಗೋಡಿನ ಚಂದ್ರಗಿರಿ ತೀರದ ಗ್ರಾಮವೊಂದರಲ್ಲಿ ಜನಿಸಿದರು. ತಂದೆ ನ್ಯಾಯವಾದಿಗಳಾಗಿದ್ದ ಪಿ. ಅಹಮದ್ ಅವರು ಮತ್ತು ತಾಯಿ ಚೈನಾಬಿ ಅವರು. ಸಾರಾ ಅವರ ಪ್ರಾಥಮಿಕ ವಿದ್ಯಾಭ್ಯಾಸ ಅವರ ಹುಟ್ಟಿದೂರಿನಲ್ಲೇ ನೆರವೇರಿತು. ಮುಂದೆ ಅವರು ಹೈಸ್ಕೂಲುವರೆಗೆ ಕಲಿತದ್ದು ಕಾಸರಗೋಡಿನಲ್ಲಿ. ಎಂಜನಿಯರ್ ಆಗಿದ್ದ ಅಬೂಬಕ್ಕರ್ ಅವರೊಡನೆ ಸಾರಾ ಅವರ ವಿವಾಹ ಏರ್ಪಟ್ಟು ವಿದ್ಯಾಭ್ಯಾಸಕ್ಕೆ ವಿದಾಯ ಹೇಳುವಂತಾಯಿತು. ಆದರೆ ಓದಿನಲ್ಲಿ ನಿರಂತರ ಆಸಕ್ತರಾಗಿದ್ದ ಸಾರಾ ಅವರು ಶಿವರಾಮ ಕಾರಂತರು, ಇನಾಂದಾರ್, ಭೈರಪ್ಪ, ಅನಂತಮೂರ್ತಿ ಇವರೆಲ್ಲರ ಬರವಣಿಗೆಗೆ ಮಾರು ಹೋಗಿ ಸದಾ ...
READ MORE