‘ಸೂರ್ಯಸ್ತದಿಂದ ಸೂರ್ಯೊದಯದವರೆಗೆ’ ಲೇಖಕ ಸಿದ್ಧಲಿಂಗ ಪಟ್ಟಣಶೆಟ್ಟಿ ನಾಟಕ. ಒಬ್ಬ ಸ್ತ್ರೀ ಮತ್ತು ಪುರುಷತ್ವರಹಿತ ಪುರುಷನೊಬ್ಬನ ಮನಸ್ಸಿನ ಎಳೆ-ಎಳೆಯನ್ನು ಬಿಡಿಸುವ ಯಶಸ್ವೀ ನಾಟಕವಿದು. ಹೆಣ್ಣಿನ ತಲ್ಲಣಗಳು ಮತ್ತು ಜಾಣ್ಮೆಯನ್ನು ವಿವರಿಸುತ್ತಲೇ ಬದುಕಿನ ಗಮ್ಯವನ್ನು ವಿಸ್ತರಿಸುವಂತೆ ಮಾಡುತ್ತದೆ.
ಕವಿ-ಅನುವಾದಕ-ಅಂಕಣಕಾರರಾಗಿ ಚಿರಪರಿಚಿತರಿರುವ ಸಿದ್ಧಲಿಂಗ ಪಟ್ಟಣಶೆಟ್ಟಿ ಅವರು ಜನಿಸಿದ್ದು 1939ರ ನವಂಬರ್ ೩ರಂದು. ಧಾರವಾಡ ಸಮೀಪದ ಯಾದವಾಡ ಎಂಬ ಹಳ್ಳಿಯಲ್ಲಿ ಜನಿಸಿದ ಅವರು ಒಂದೂವರೆ ವರ್ಷದವರಿರುವಾಗಲೇ ತಂದೆಯನ್ನು ಕಳೆದುಕೊಂಡರು. ಕಡು ಬಡತನದಿಂದಾಗಿ ತಾಯಿಯ ತವರು ಮನೆ ಮನಗುಂಡಿ ಸೇರಿದರು. ಚಹಾ ಅಂಗಡಿಯಲ್ಲಿ ಕೆಲಸ ಮಾಡುತ್ತ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿದರು. ಶಿಕ್ಷಣ ಮುಂದುವರಿಸುವ ದೃಢ ಸಂಕಲ್ಪದಿಂದ ತಾಯಿಯೊಂದಿಗೆ ಮತ್ತೆ ಧಾರವಾಡಕ್ಕೆ ಬಂದ ಅವರು ಹಿಂದೀ ಎಂ.ಎ., ಪಿಎಚ್.ಡಿ. ಪದವಿಗಳನ್ನು ಪಡೆದರು. ಒಂದು ವರ್ಷ ಹೈಸ್ಕೂಲ್ ಶಿಕ್ಷಕ, ಒಂದು ವರ್ಷ ಶಿರಸಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದು, 1966 ರಿಂದ 1999ರ ವರೆಗೆ ಕರ್ನಾಟಕ ...
READ MORE