ಮಕ್ಕಳಲ್ಲಿ ಉತ್ತಮ ಚಾರಿತ್ಯ್ರ, ಸಂಸ್ಖಾರ ಹಾಗೂ ವ್ಯಕ್ತಿತ್ವ ನಿರ್ಮಾಣದಲ್ಲಿ ಸ್ವಾಮಿ ವಿವೇಕಾನಂದರ ಬದುಕು ಬಹುಮುಖ್ಯ ಪಾತ್ರ ವಹಿಸುತ್ತದೆ. ಅವರ ಸಂದೇಶಗಳು ಮಕ್ಕಳ ಮನಸ್ಸಿನ ಮೇಲೆ ಉತ್ತಮ ಪರಿಣಾಮ ಬೀರಿ ಮಾನವೀಯತೆ ಹಾಗೂ ದೇಶಾಭಿಮಾನವನ್ನು ಬಡಿದೆಬ್ಬಿಸುತ್ತವೆ. ಪುಸ್ತಕ ಪ್ರೀತಿಯೂ ಬೆಳೆಯುತ್ತದೆ. ಒಂದು ಮಗುವು ಈ ಜಗತ್ತನ್ನು ಜಿಜ್ಞಾಸೆಯಿಂದ ನೋಡಿ ಕಲಿಯಲು ಪುಸ್ತಕದ ಓದು ಮುಖ್ಯ. ಈ ಹವ್ಯಾಸ ತಮ್ಮದಾಗಿಸಿಕೊಳ್ಳಲಿ ಎಂಬ ಸದಾಶಯದೊಂದಿಗೆ ದೊಡ್ಡ ದೊಡ್ಡ ಮಹನೀಯರ ಚಿಂತನೆಗಳನ್ನು ಸಣ್ಣ ಸಣ್ಣಪುಸ್ತಕಗಳಲ್ಲಿ ಅತಿ ಸರಳವಾಗಿ ಕೊಡಲು ಪ್ರಯತ್ನಿಸಿದ್ದೇನೆ ಎಂದು ಲೇಖಕರು ಹೇಳಿದ್ದಾರೆ.
ಕಾಶೀನಾಥ ಅಂಬಲಗೆ ಅವರು ಹುಟ್ಟಿದ್ದು 10-07-1947 ರಲ್ಲಿ. ಬೀದರ ಜಿಲ್ಲೆಯ, ಬಸವಕಲ್ಯಾಣ ತಾಲೂಕಿನ ಮುಚಳಂಬಿ ಎಂಬ ಗ್ರಾಮದಲ್ಲಿ. ಇವರ ತಂದೆ ರಾಚಪ್ಪ ಅಂಬಲಗೆ, ತಾಯಿ ಗುರಮ್ಮ ಅಂಬಲಗೆ. ಕನ್ನಡದಲ್ಲಿ ಎಂ.ಎ ಪದವಿ ಪಡೆದ ಅಂಬಲಗೆ ಹಿಂದಿ ಭಾಷೆಯಲ್ಲೂ ಎಂ.ಎ ಪದವಿ ಗಳಿಸಿದ್ದಾರೆ. ಬಿ.ಎಡ್ ಜೊತೆಗೆ ಪಿಎಚ್.ಡಿ ಪದವಿಯನ್ನು ಪಡೆದಿದ್ದಾರೆ. ಪಿಎಚ್.ಡಿ ಪದವಿಯನಂತರ ಅಧ್ಯಾಪಕ ವೃತ್ತಿಯನ್ನು ಆಯ್ದುಕೊಂಡ ಅವರು ಮಹಾವಿದ್ಯಾಲಯದಲ್ಲಿ 21ವರ್ಷ, ವಿಶ್ವವಿದ್ಯಾಲಯದಲ್ಲಿ 12 ವರ್ಷ ಹಿಂದಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಜೊತೆಗೆ ಪಿಎಚ್.ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿಯೂ ತೊಡಗಿಸಿಕೊಂಡಿದ್ದಾರೆ. ಕವಿ, ಲೇಖಕ, ಸಾಹಿತಿ, ಕಾದಂಬರಿಗಾರರಾದ ಅಂಬಲಗೆ ಅನುವಾದಕರಾಗಿಯೂ ಪ್ರಸಿದ್ಧರು. ಜೊತೆಗೆ ...
READ MORE