ಗೋವನ್ನು ಸರ್ವದೇವತೆಗಳ ಸ್ವರೂಪವೆಂದು ಪೂಜಿಸುವ ಕಾಳಿಂಗಜ್ಜ ಮತ್ತು ಅದು ಹಾಲು ಮಾಂಸಗಳನ್ನು ಕೊಡುವ ಪ್ರಾಣಿ ಮಾತ್ರ ಎಂದು ಭಾವಿಸುವ ಆಮೆರಿಕೆಯಿಂದ ಹಿಂತಿರುಗಿದ ಮೊಮ್ಮಗ, ಇವರ ಮೌಲ್ಯಸಂವೇದನೆಗಳ ನಡುವೆ ನಡೆಯುವ ತಿಕ್ಕಾಟವೇ ಈ ಕಾದಂಬರಿಯ ವಸ್ತು. ಪ್ರಾಯಶಃ ಭಾರತದ ಎಲ್ಲ ಭಾಷೆಗಳಲ್ಲೂ ಪ್ರಚಲಿತವಿರುವ ಗೋವಿನ ಹಾಡಿನ ಹಿನ್ನಲೆಯಲ್ಲಿ ಆರಂಭವಾಗುವ ಕಾದಂಬರಿಯು, ಭಾರತೀಯ ಸಂಸ್ಕೃತಿಯ ಮೂಲ ಬೇರುಗಳನ್ನು ಹಿನ್ನಲೆಯಲ್ಲಿ ಕಾಣಿಸುತ್ತದೆ. ಈ ಕೃತಿಯನ್ನಾಧರಿಸಿ ಕನ್ನಡ ಮತ್ತು ಹಿಂದಿಯಲ್ಲಿ ನಿರ್ಮಿಸಿರುವ ಚಲನ ಚಿತ್ರಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮನ್ನಣೆ ಪಡೆದಿವೆ. ಈ ಕಾದಂಬರಿಯ ಹಿಂದೀ ಅನುವಾದವೂ ಅಪಾರವಾದ ಮೆಚ್ಚುಗೆ ಪಡೆದಿದೆ. ಇದೊಂದು ಉತ್ಕೃಷ್ಟ ಸಾಹಿತ್ಯಕೃತಿ ಎಂದು ಭಾವಿಸುವವರಿರುವಂತೆಯೇ, ಪ್ರಗತಿವಿರೋಧಿ,ಪ್ರತಿಗಾಮಿ ಮೌಲ್ಯಗಳನ್ನು ಪ್ರತಿಪಾದಿಸುವ ತೀರ ಕಳಪೆ ಕಾದಂಬರಿ ಎಂದು ಇದನ್ನು ದೇಷಿಸುವವರೂ ಇದ್ದಾರೆ. ಪ್ರೀತಿ ದ್ವೇಷಗಳೆರಡನ್ನೂ ಪ್ರಚೋದಿಸುವ ಈ ಗುಣವು ಕಾದಂಬರಿಯ ಶಕ್ತಿಯ ಗುರುತಾಗಿದೆ.
ಜನಪ್ರಿಯ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು ಮೀಮಾಂಸಕರೂ ಹೌದು. ಹಾಸನ ಜಿಲ್ಲೆ ಚೆನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ 1931ರ ಆಗಸ್ಟ್ 20ರಂದು ಜನಿಸಿದರು. ತಂದೆ ಲಿಂಗಣ್ಣಯ್ಯ- ತಾಯಿ ಗೌರಮ್ಮ. ತಮ್ಮ ಹುಟ್ಟೂರಿನ ಸುತ್ತಮುತ್ತಲ ಶಾಲೆಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿ ಮೈಸೂರಿಗೆ ಬಂದು ಶಾರದಾವಿಲಾಸ ಪ್ರೌಢಶಾಲೆಯಲ್ಲಿ ಓದಿ, ಮಹಾರಾಜ ಕಾಲೇಜಿನಲ್ಲಿ ಬಿ.ಎ. ಮಾಡಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಗಳಿಸಿದರು. ಅನಂತರ ಹುಬ್ಬಳ್ಳಿಯ ಕಾಡುಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕ (1958-60), ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕ (1960-66), ದೆಹಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಉಪಪ್ರಾಧ್ಯಾಪಕ (1967-1971) ...
READ MORE