“ತಾಳೀ ಕಟ್ಟೋಕ್ಕೂಲೀನೇ?” ಎಂಬ ಪುಸ್ತಕವು ಟಿ. ಪಿ. ಕೈಲಾಸಂ ಅವರ ನಾಟಕವಾಗಿದೆ. ವಿಭಿನ್ನವಾದ ಕಥಾಹಂದಾರವನ್ನು ಹೊಂದಿರುವ ಈ ನಾಟಕವು ಸಮಾಜದ ಹುಳುನ್ನು ವಿಡಂಬಿಸುತ್ತದೆ. ಟಿ.ಪಿ,ಕೈಲಾಸಂ ಅವರ ವಿಡಂಬನಾ ಶೈಲಿಯ ತಾಕತ್ತು ಇಲ್ಲಿಯೂ ಪ್ರಜ್ವಲಿಸುತ್ತದೆ.
ಕನ್ನಡ ನಾಟಕರಂಗದಲ್ಲಿ ಹೊಸಶಕೆಯನ್ನು ಆರಂಭಿಸಿದ ಟಿ ಪಿ. ಕೈಲಾಸಂ ಅವರು ಬೆಂಗಳೂರಿನಲ್ಲಿ 26-07-1885ರಲ್ಲಿ ತ್ಯಾಗರಾಜ ಪರಮಶಿವ ಅಯ್ಯರ್ – ಕಲಮಮ್ಮ ದಂಪತಿಗಳ ಪುತ್ರರಾಗಿ ಜನಿಸಿದರು. ಬೆಂಗಳೂರು, ಹಾಸನ, ಮೈಸೂರುಗಳಲ್ಲಿ ಶಾಲಾ ಶಿಕ್ಷಣ ಮುಗಿಸಿ 1908ರಲ್ಲಿ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿಗೆ ಸೇರಿ ಬಿ ಎ ಪದವಿಗಳಿಸಿದರು. ಪ್ರೌಢವ್ಯಾಸಂಗಕ್ಕೆ ಲಂಡನ್ನಿಗೆ ತೆರಳಿ 6 ವರ್ಷಗಳ ಕಾಲ ಭೂಗರ್ಭಶಾಸ್ತ್ರ ಅಭ್ಯಸಿಸಿ 1915ಕ್ಕೆ ಬೆಂಗಳೂರಿಗೆ ಹಿಂತಿರುಗಿದರು. ಭೂಗರ್ಭಶಾಸ್ತ್ರ ಇಲಾಖೆಯಲ್ಲಿ ಭೂಶೋಧಕರಾಗಿ ಸೇರಿ 5 ವರ್ಷ ಉದ್ಯೋಗ ಮಾಡಿದರು. ಅನಂತರ ರಾಜೀನಾಮೆ ನೀಡಿ ರಂಗಭೂಮಿಯ ಚಟುವಟಿಕೆಗಳಲ್ಲಿ ನಿರತರಾದರು. ವ್ಯಾಯಾಮಕ್ಕೆ ಹೆಚ್ಚು ಒತ್ತು ಕೊಟ್ಟಿದ್ದ ಕೈಲಾಸಂ ಕನ್ನಡ ...
READ MORE