ಟಿ.ಪಿ. ಕೈಲಾಸಂ ಅವರ ನಾಟಕ ಕೃತಿ. ತಾಳೀ ಕಟ್ಟೋಕ್ ಕೂಲಿನೇ ಎಂಬ ಈ ದೃಶ್ಯಮಾಲೆ ಟೊಳ್ಳುಗಟ್ಟಿ ಅಥವಾ ಮಕ್ಕಳಿಸ್ಕೂಲ್ ಮನೇಲಲ್ವೇ ಎಂಬ ದೃಶ್ಯದ ಮುಂದಿನ ಭಾಗ. ಆದ್ದರಿಂದ ಇದನ್ನು ಓದುವ ಮುಂಚೆ ಪೂರ್ವಭಾಗದ ಕಥಾ ಪರಿಚಯ ಆಗಿದ್ದರೆ ಅನುಕೂಲ ಎಂದು ಸೂಚಿಸಲಾಗಿದೆ. ಸಾಮಾಜಿಕ ವೈಪರೀತ್ಯಗಳನ್ನು ವಿಡಂಬಿಸುವ ಕೈಲಾಸಂ ಶೈಲಿ ಇಲ್ಲಿಯೂ ಅಷ್ಟೇ ಗಾಢವಾಗಿ ಪರಿಣಾಮಕಾರಿಯಾಗಿ ವ್ಯಕ್ತವಾಗಿದೆ.
ಕನ್ನಡ ನಾಟಕರಂಗದಲ್ಲಿ ಹೊಸಶಕೆಯನ್ನು ಆರಂಭಿಸಿದ ಟಿ ಪಿ. ಕೈಲಾಸಂ ಅವರು ಬೆಂಗಳೂರಿನಲ್ಲಿ 26-07-1885ರಲ್ಲಿ ತ್ಯಾಗರಾಜ ಪರಮಶಿವ ಅಯ್ಯರ್ – ಕಲಮಮ್ಮ ದಂಪತಿಗಳ ಪುತ್ರರಾಗಿ ಜನಿಸಿದರು. ಬೆಂಗಳೂರು, ಹಾಸನ, ಮೈಸೂರುಗಳಲ್ಲಿ ಶಾಲಾ ಶಿಕ್ಷಣ ಮುಗಿಸಿ 1908ರಲ್ಲಿ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿಗೆ ಸೇರಿ ಬಿ ಎ ಪದವಿಗಳಿಸಿದರು. ಪ್ರೌಢವ್ಯಾಸಂಗಕ್ಕೆ ಲಂಡನ್ನಿಗೆ ತೆರಳಿ 6 ವರ್ಷಗಳ ಕಾಲ ಭೂಗರ್ಭಶಾಸ್ತ್ರ ಅಭ್ಯಸಿಸಿ 1915ಕ್ಕೆ ಬೆಂಗಳೂರಿಗೆ ಹಿಂತಿರುಗಿದರು. ಭೂಗರ್ಭಶಾಸ್ತ್ರ ಇಲಾಖೆಯಲ್ಲಿ ಭೂಶೋಧಕರಾಗಿ ಸೇರಿ 5 ವರ್ಷ ಉದ್ಯೋಗ ಮಾಡಿದರು. ಅನಂತರ ರಾಜೀನಾಮೆ ನೀಡಿ ರಂಗಭೂಮಿಯ ಚಟುವಟಿಕೆಗಳಲ್ಲಿ ನಿರತರಾದರು. ವ್ಯಾಯಾಮಕ್ಕೆ ಹೆಚ್ಚು ಒತ್ತು ಕೊಟ್ಟಿದ್ದ ಕೈಲಾಸಂ ಕನ್ನಡ ...
READ MORE