ತಲ್ಲಣಕೆ ಬಾಯಿಲ್ಲವಯ್ಯ-ಕಥ ಸಂಕಲನದ ಎಲ್ಲ ಕತೆಗಳು ಕನ್ನಡದ ಸಾಪ್ತಾಹಿಕ, ವಾರಪತ್ರಿಕೆ, ಮಾಸಿಕ, ವಿಶೇಷಾಂಕಗಳಲ್ಲಿ ಪ್ರಕಟಣೆ ಕಂಡು ಓದುಗರನ್ನು ಎದುರುಗೊಂಡಿವೆ. ಯಾವುದೇ ಕ್ಲಿಷ್ಟತೆಯಿಲ್ಲದ ಸರಳ ಭಾಷ, ನಿರೂಪಣೆ, ನೇರ ಕತೆಗಾರಿಕೆಗಳಿಂದ ಒಮ್ಮೆಲೆ ಓದುಗನ ಮನದಾಳಕ್ಕಿಳಿಯುವ ಕತೆಗಳು ಆಧುನಿಕ ಸೂಕ್ಷ್ಮತೆಗಳನ್ನು, ಗಟ್ಟಿತನವನ್ನು ತೆರೆದಿಡುತ್ತವೆ.
ಲೇಖಕಿ ವಸುಮತಿ ಉಡುಪ ಅವರು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕಿರಣಕೆರೆಯಲ್ಲಿ 1948 ಏಪ್ರಿಲ್ 18ರಂದು ಜನಿಸಿದರು. ತಾಯಿ ತ್ರಿಪುರಾಂಬ, ತಂದೆ ರಂಗಾಭಟ್ಟರು. ತೀರ್ಥಹಳ್ಳಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದಾರೆ. ಇವರು ಬರೆದ ಕಥೆಗಳು ಕರ್ನಾಟಕದ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಹಲವು ಕಥೆಗಳು ವಿವಿಧ ಭಾಷೆಗೆ ಅನುವಾದಗೊಂಡಿವೆ. ಪರಿವರ್ತನೆ, ಸಂಬಂಧಗಳು, ಅನವರತ, ಅವ್ಯಕ್ತ ವಸುಮತಿ ಅವರ ಪ್ರಮುಖ ಕಾದಂಬರಿಗಳು. ಬಂದನಾ ಹುಲಿರಾಯನು, ವಿಕಲ್ಪ, ಶೇಷ ಪ್ರಶ್ನೆ ಅವರ ಕತಾ ಸಂಕಲನ. ‘ಸೀತಾಳದಂಡೆ’ ಮತ್ತೊಂದು ಪ್ರಬಂಧ ಸಂಕಲನ. ಅವರ ಹಲವಾರು ಕತೆಗಳು ಹಿಂದಿ, ತೆಲುಗು ಭಾಷೆಗೆ ಅನುವಾದಗೊಂಡಿದೆ. ಅವರ ಸಾಹಿತ್ಯ ಸೇವೆಗೆ ‘ಅಳಸಿಂಗ ಪ್ರಶಸ್ತಿ, ರಾಮಕ್ಕ ಪದ್ಮಕ್ಕ ...
READ MORE