ಕತೆಗಾರರಾದ ಅಮರೇಶ ನುಗಡೋಣಿಯವರ ’ತಮಂಧದ ಕೇಡು’ ಕಥಾ ಸಂಗ್ರಹವು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದೆ.
ಈ ಕತೆಯಲ್ಲಿ ದುರುಗ ಎನ್ನುವ ಜೀತದಾಳಿನ ದುಃಸ್ವಪ್ನದೊಂದಿಗೆ ಕತೆ ಪ್ರಾರಂಭವಾಗುತ್ತದೆ. ತನ್ನ ಒಡೆಯನಾದ ಶಾಂತಗೌಡನ ಜಮೀನಿನಲ್ಲಿರುವ ಎರಡು ದೊಡ್ಡ ಮರಗಳ ನಡುವೆ ಜೋಪಡಿ ಹಾಕಿಕೊಂಡು, ದುರುಗ ತನ್ನ ಹೆಂಡತಿ ಚಂದವ್ವ ಹಾಗು ಜೋಳಿಗೆ ಕೂಸು ಚೆನ್ನಮಲ್ಲಪ್ಪನೊಂದಿಗೆ ಬದುಕು ಸಾಗಿಸುತ್ತಾ ಇರುವ ಸುತ್ತ ಈ ಕಥೆಯು ಪಾತ್ರ, ಸನ್ನಿವೇಶಗಳ ಸುತ್ತ ಸಾಗುತ್ತದೆ.
ಲೇಖಕರು ಈ ಕಥಾ ಸಂಗ್ರಹದಲ್ಲಿ ಶೋಷಿತನ ಬವಣೆಯ ವರ್ಣನೆಗಿಂತ, ಶೋಷಣಾವ್ಯವಸ್ಥೆಯ ಚಿತ್ರಣಕ್ಕೆ ಹೆಚ್ಚು ಮಹತ್ವ ನೀಡುತ್ತಾರೆ. ಶೋಷಿತನು ತನ್ನ ತನು ಹಾಗು ಮನವನ್ನಷ್ಟೇ ಅಲ್ಲ, ತನ್ನ ಆತ್ಮವನ್ನೂ ಸಹ ತನ್ನ ಯಜಮಾನನ ಊಳಿಗಕ್ಕೆ ಒಪ್ಪಿಸಿಬಿಟ್ಟಿರುತ್ತಾನೆ. ಇದಕ್ಕೆ ಪ್ರತಿಯಾಗಿ ಯಜಮಾನನು ದರ್ಪ, ದಬ್ಬಾಳಿಕೆ ಪ್ರದರ್ಶಿಸುತ್ತಾನೆ. ಇಂತಹ ತಮಂಧದ ಕೇಡಿನಿಂದ ಹೊರಬರಬೇಕಾದರೆ ಶಿಕ್ಷಣದ ಬೆಳಕು ಬೇಕು. ಆದರೆ ಈ ವ್ಯವಸ್ಥೆಯು ಅಂತಹ ಶಿಕ್ಷಿತ ಪ್ರತಿಭಟನಾಕಾರರನ್ನೂ ಸಹ ನಿರ್ದಾಕ್ಷಿಣ್ಯವಾಗಿ ಹೊಸಕಿ ಹಾಕಿ ಬಿಡುವ ಚಿತ್ರಣವನ್ನು ಈ ಕಥೆ ಹೆಣೆಯುತ್ತದೆ.
ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ನುಗಡೋಣಿಯಲ್ಲಿ 1960 ರಲ್ಲಿ ಜನಿಸಿದ ಅಮರೇಶ ನುಗಡೋಣಿಯವರು ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದೇವನೂರು ಮಹಾದೇವರ ನಂತರದ ಲೇಖಕರಲ್ಲಿ ಶೋಷಣಾವ್ಯವಸ್ಥೆಯ ವಿವಿಧ ಮುಖಗಳನ್ನು ನುಗಡೋಣಿಯವರಷ್ಟು ಸಮರ್ಥವಾಗಿ ಚಿತ್ರಿಸಿದ ಲೇಖಕರು ಇನ್ನೊಬ್ಬರಿಲ್ಲ ಎಂದು ಹೇಳಬಹುದು. ಸಾಹಿತ್ಯದ ಹಲವು ಮಜಲುಗಳಲ್ಲಿ ಕೆಲಸ ಮಾಡಿರುವ ಅವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. ಅವರ ಕವನ ಸಂಕಲನಗಳು- ನೀನು, ಅವನು, ಪರಿಸರ. ಕಥಾ ಸಂಕಲನ- ಮಣ್ಣು ಸೇರಿತು ಬೀಜ, ಅರಿವು (ನವಸಾಕ್ಷರರಿಗಾಗಿ), ತಮಂಧದ ಕೇಡು, ಮುಸ್ಸಂಜೆಯ ಕಥಾನಕಗಳು, ಸವಾರಿ, ಹಾಗೂ ವ್ಯಕ್ತಿ ಪರಿಚಯ ಕೃತಿಯಲ್ಲಿ ಶ್ರೀಕೃಷ್ಣ ಆಲನಹಳ್ಳಿ (ಬದುಕು ...
READ MORE