ತೆಲುಗು ಭಾಷೆಯ 09 ಜನ ಲೇಖಕರ ಆಯ್ದ 25 ತೆಲುಗು ಸಣ್ಣ ಕತೆಗಳನ್ನುಕನ್ನಡಕ್ಕೆ ಅನುವಾದಿಸಿ "ತಣ್ಣೀರ ಬಟ್ಟೆಯ ಬಿಸಿ" ಎಂಬ ಹೆಸರಿನಲ್ಲಿ ಧನಪಾಲ ನಾಗರಾಜಪ್ಪನವರು ಕಥಾ ಸಂಪುಟವಾಗಿ ಪ್ರಕಟಿಸಿದ್ದಾರೆ. ಇಲ್ಲಿಯ ಒಂದೊಂದು ಕತೆಯೂ ಓದುಗರನ್ನು ಸೆಳೆಯುತ್ತದೆ. ಕೆಲವು ಕತೆಗಳು ಗಾತ್ರದಲ್ಲಿ ತುಂಬಾ ಚಿಕ್ಕವು. ಅದರೆ, ಕತೆಗಳ ಆಶಯವು ಮನಕಲುಕುತ್ತವೆ. ಪ್ರತಿ ಕತೆಯೂ ಭಿನ್ನವಾಗಿದೆ.
ಧನಪಾಲ ನಾಗರಾಜಪ್ಪನವರು ಅನುವಾದಕರಾಗಿ ಚಿರಪರಿಚಿತರು. ನಾಗರಾಜಪ್ಪ ಹಾಗೂ ರಾಮಚಂದ್ರಮ್ಮ ದಂಪತಿಯ ಮಗನಾಗಿ 20-06-1987 ರಂದು ಅವಿಭಜಿತ ಕೋಲಾರ ಜಿಲ್ಲೆಯ ಚಿಂತಾಮಣಿ ಪಟ್ಟಣದಲ್ಲಿ. ಜನಿಸಿದರು. ಭಾರತೀಯ ವಾಯು ಸೈನ್ಯದಲ್ಲಿ PBOR ಶ್ರೇಣಿಯಲ್ಲಿ ಕಳೆದ 15 ವರ್ಷಗಳಿಂದ ಏರ್ ಮೆನ್ ಆಗಿ ವೈದ್ಯಕೀಯ ಸಹಾಯಕನ ವೃತ್ತಿ. ಕಳೆದ 15 ವರ್ಷಗಳಿಂದ ಸಾಹಿತ್ಯಿಕ ಕೃಷಿಯಲ್ಲಿ ನಿರತನಾಗಿದ್ದು ಸ್ವ ರಚನೆ, ಸಂಪಾದನೆ, ಪ್ರಕಾಶನ ಮತ್ತು ಅನುವಾದದ ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ. ನಿವೇದನೆ (ಕವನ ಸಂಕಲನ), ಮಿತ್ರವಾಣಿ (ಪ್ರಧಾನ ಸಂಪಾದಕತ್ವದ ಕವನ ಸಂಕಲನ), ಕಾಡುವ ಕಥೆಗಳು (ಅನುವಾದಿತ ಕಥಾ ಸಂಕಲನ, ತೆಲುಗು ಮೂಲ : ಸಲೀಂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು), ತಣ್ಣೀರ ...
READ MORE