ಖ್ಯಾತ ಕವಿ ಡಾ. ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಕಾವ್ಯ ಕುರಿತು ಬರೆದ 40 ಪ್ರಬಂಧಗಳ ಸಂಕಲನ-ತಾವರೆಯ ಬಾಗಿಲು. ಕಾವ್ಯ ಕುರಿತೇ ಬರಹಗಳನ್ನು ವಿಶ್ಲೇಷಣಾತ್ಮಕವಾಗಿ ಬರೆಯುವ ಲೇಖಕರು, ಕಾವ್ಯದ ಒಳ-ಹೊರಗನ್ನು, ಅದರ ಮಹತ್ವವನ್ನು, ಅದರ ಗುಣಲಕ್ಷಣಗಳನ್ನು ಅತ್ಯಂತ ಪ್ರಬುದ್ಧವಾಗಿ ಮಂಡಿಸಿರುವ ಬರಹಗಳನ್ನು ಸಂಕಲಿಸಲಾಗಿದೆ.
ವೆಂಕಟೇಶ ಮೂರ್ತಿ ಅವರು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಎಂಬ ಸಣ್ಣ ಹಳ್ಳಿಯಲ್ಲಿ ಮಧ್ಯಮವರ್ಗದ ಕುಟುಂಬವೊಂದರಲ್ಲಿ 23-06-1944ರಲ್ಲಿ ಜನಿಸಿದರು. ಮೂವತ್ತು ವರ್ಷಗಳ ಕಾಲ ಗ್ರಾಮ್ಯಜೀವನ ನಡೆಸಿ ನಂತರ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ 1973ರಲ್ಲಿ ನೇಮಕಗೊಂಡರು. 2000 ರಲ್ಲಿ ನಿವೃತ್ತರಾದ ಅವರು ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಪ್ರಾರಂಭದಲ್ಲಿ ಯಕ್ಷಗಾನ, ಬಯಲಾಟದಂಥ ರಂಗಪ್ರದರ್ಶನಗಳು ಇವರ ಮೇಲೆ ಗಾಢ ಪ್ರಭಾವ ಬೀರಿದವು. ಬಾಲ್ಯದಲ್ಲೇ ಕುಮಾರವ್ಯಾಸ, ಪುರಂದರ, ಲಕ್ಷ್ಮೀಶ ಮೊದಲಾದವರ ಕೃತಿಗಳ ನಿಕಟ ಸಂಪರ್ಕ ದೊರೆಯಿತು. ಮುಂದೆ ಕನ್ನಡ, ಸಂಸ್ಕೃತ, ಇಂಗ್ಲಿಷ್ ಸಾಹಿತ್ಯ ಪರಂಪರೆಯೊಂದಿಗೆ ನಡೆಸಲಾದ ...
READ MORE