ಕೆ.ಟಿ.ಗಟ್ಟಿ. ಅವರು ಸಾಹಿತ್ಯ ಕ್ಷೇತ್ರವನ್ನು ಪ್ರವೇಶಿಸಿದ್ದು, 1956ರಲ್ಲಿ “ಮುಂಗಾರ ಮುಗಿಲು' ಎಂಬ ಒಂದು ಚಿಕ್ಕ ಕತೆಯ ಮೂಲಕ. ಆಗ ಅವರಿಗೆ ಹದಿನೆಂಟು ವರ್ಷ. ಅನಂತರ ಸುಮಾರು ಹದಿನೈದು ವರ್ಷ ತನ್ನ ಓದಿನ ನಡುವೆ ಬೇರೆ ಬೇರೆ ದಿನ ಪತ್ರಿಕೆ, ವಾರ ಪತ್ರಿಕೆ, ಮಾಸ ಪತ್ರಿಕೆಗಳಲ್ಲಿ ಅವರ ಕತೆ, ಕವಿತೆ ಮತ್ತು ಲೇಖನಗಳು ಪ್ರಕಟವಾಗುತ್ತಿದ್ದವು. ಕೆ.ಟಿ.ಗಟ್ಟಿಯವರ ಮೊದಲ ಕಾದಂಬರಿ 'ಶಬ್ದಗಳು' ಪ್ರಕಟವಾದದ್ದು 1973ರಲ್ಲ. ಕಾದಂಬರಿ ಬರವಣಿಗೆಯಲ್ಲದೆ, ಸಣ್ಣ ಕತೆ, ಕಾವ್ಯ, ಪ್ರಬಂಧ, ನಾಟಕ, ಬಾನುಲಿ ನಾಟಕ, ಪ್ರವಾಸ ಕಥನ, ಮಕ್ಕಳ ಸಾಹಿತ್ಯ, ಅನುವಾದ, ಭಾಷಾ ಶಾಸ್ತ್ರ, ಶಿಕ್ಷಣ ಮುಂತಾದ ವಿವಿಧ ಪ್ರಕಾರಗಳಲ್ಲಿ ಕನ್ನಡದಲ್ಲ, ಇಂಗ್ಲಿಷಿನಲ್ಲಿ ಮತ್ತು ತುಳುಭಾಷೆಯಲ್ಲಿ ಗಟ್ಟಿಯವರ ನೂರಕ್ಕೂ ಹೆಚ್ಚು ಕೃತಿಗಳು ಪ್ರಕಟವಾಗಿವೆ. ಅವರ “ಕತೆ ಇನ್ನೂ ಇದೆ', 'ಅನುಭವದಡಿಗೆಯ ಮಾಡಿ' ಮತ್ತು ತಾಳಮದ್ದಳೆ' ಎಂಬ ಮೂರು ಬಾನುಲಿ ಸರಣಿ ನಾಟಕಗಳು ಬಹಳ ಪ್ರಸಿದ್ದ. ಗಟ್ಟಯವರ ಆತ್ಮ ಕಥೆ ''ತೀರ' ಒಂದು ವಿಶಿಷ್ಟ ಕೃತಿಯಾಗಿದೆ.
ಕಾದಂಬರಿಕಾರ, ಭಾಷಾತಜ್ಞ, ಸಮರ್ಥ ಪ್ರಾಧ್ಯಾಪಕರೆನಿಸಿದ ಕೆ.ಟಿ. ಗಟ್ಟಿಯವರು ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದರು. ತಂದೆ ಧೂಮಪ್ಪಗಟ್ಟಿಯವರು ಕೃಷಿಕರಾದರೂ ಯಕ್ಷಗಾನ ಕಲೆಯ ಬಗ್ಗೆ ಅಪಾರ ಒಲವಿದ್ದವರು. ತಾಯಿ ಪರಮೇಶ್ವರಿ ತುಳು-ಮಲಯಾಳಂ ಪಾಡ್ದನ ಹಾಡುಗಳನ್ನು ಕಲಿತವರು. ಉತ್ತಮ ಭಾಷೆ, ಆಕರ್ಷಕ ಶೈಲಿ, ಹೊಸ ಹೊಸ ವಸ್ತು, ಸರಳ ನಿರೂಪಣೆಗಳ ಮೂಲಕ ಕನ್ನಡ ಸಾರಸ್ವತ ಲೋಕದಲ್ಲಿ ಮನೆ ಮಾತಾದ ಹಿರಿಯ ಕಥೆಗಾರ ಕೆ.ಟಿ.ಗಟ್ಟಿ ಅವರು ಎಲ್ಲಾ ಓದುಗರಿಗೆ ಚಿರಪರಿಚಿತರು. ಕೇರಳ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಬಿಎಡ್ ಪದವಿ ಪಡೆದಿರುವ ಕೆ.ಟಿ.ಗಟ್ಟಿ ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯವರು. ಜನಿಸಿದ್ದು 1938ರಲ್ಲಿ. ಸದ್ಯ ...
READ MORE