ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರು ಕಾವ್ಯ, ಕಾದಂಬರಿ, ನಾಟಕ, ಮಿಮರ್ಶೆ, ಅನುವಾದ, ಸಂಗೀತ ಮುಂತಾದ ಪ್ರಕಾರಗಳಲ್ಲಿ ಸುಮಾರು 16 ಕೃತಿಗಳನ್ನು ಪ್ರಕಟಿಸಿ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಅನನ್ಯ ಕೊಡುಗೆಯನ್ನು ನೀಡಿದ್ದಾರೆ. ತೀರದ ಹೆಜ್ಜೆ ಇವರ ಎರಡನೇ ವಿಮರ್ಶಾ ಕೃತಿಯಾಗಿದೆ. ಈ ಕೃತಿಯಲ್ಲಿ ಒಟ್ಟು 25 ಲೇಖನಗಳಿವೆ. ಸಮಕಾಲೀನ ಅಧ್ಯಯನ ವಿಮರ್ಶಾ ಶಿಸ್ತುಗಳನ್ನು ಮೈಗೂಡಿಸಿಕೊಂಡು ಕೃತಿಯನ್ನು ಅಧ್ಯಯನಕ್ಕೆ ಒಳಪಡಿಸಿರುವುದರಿಂದ ಸಾಹಿತ್ಯ ಕೃತಿಯ ಮಹತ್ವವನ್ನು ಓದಗರಿಗೆ ತಿಳಿಸುತ್ತದೆ. ವಿಮರ್ಶಾ ಪಂಥಗಳ ಆಳವಾದ ಅಧ್ಯಯನ ಮತ್ತು ಆಧುನಿಕೋತ್ತರ ಚಿಂತನೆಗಳ ಕುರಿತು ಅವರು ಮಾಡುವ ವಿಮರ್ಶಾ ಬರವಣಿಗೆ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರಕ್ಕೆ ಉತ್ತಮ ಕೊಡುಗೆಯಾಗಿದೆ.
ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ಹುಟ್ಟೂರು ಉಡುಪಿಯ ಕಾಪು ಬಳಿಯ ಕರಂದಾಡಿ, ಕನ್ನಡದಲ್ಲಿ ಸ್ನಾತಕೋತ್ತರ ಪದವಿ, ಮುಂಬೈ ಅಖಿಲ ಭಾರತ ಗಂಧರ್ವ ಮಹಾವಿದ್ಯಾಲಯದಿಂದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ “ವಿಶಾರದ' ಪದವಿ. ತುಳು ಕಾದಂಬರಿ 'ಕಬರ್ಗತ್ತಲೆ'ಗೆ ತುಳುಕೂಟ(ರಿ) ಉಡುಪಿಯ 'ಪಣಿಯಾಡಿ ಪ್ರಶಸ್ತಿ’, ಕನ್ನಡ ಕಾದಂಬರಿ 'ತೊಗಲುಗೊಂಬೆ'ಗೆ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ 'ಮಲ್ಲಿಕಾ' ಪ್ರಶಸ್ತಿ ಹಾಗೂ ಮೂಡಬಿದರೆಯ ವರ್ಧಮಾನ ಪ್ರತಿಷ್ಠಾನದ 'ಯುವ ವರ್ಧಮಾನ ಪ್ರಶಸ್ತಿ'; 'ಒಳದನಿಯ ಪಲುಕುಗಳು' ವಿಮರ್ಶಾಕೃತಿಗೆ ಕ.ಸಾ.ಪ. ಲೀಲಾವತಿ ಗುರುಸಿದ್ದಪ್ಪ ಸಿಂಧೂರ ದತ್ತಿ ಪ್ರಶಸ್ತಿ, ಡಾ. ದ. ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟಿನ ದ.ರಾ.ಬೇಂದ್ರೆ ...
READ MORE