ತೀವ್ರ ಮಾನಸಿಕ ಕಾಯಿಲೆಗಳು

Author : ಕೆ.ಎಸ್. ಪವಿತ್ರ

Pages 100

₹ 90.00




Year of Publication: 2019
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು
Phone: 08022107704

Synopsys

ಮಾನಸಿಕ ಕಾಯಿಲೆಗಳ ಬಗ್ಗೆ ಇಂದಿಗೂ ಸಮಾಜದಲ್ಲಿ, ಹಲವು ವ್ಯಕ್ತಿಗಳಲ್ಲಿ ಕೆಲ ಗೊಂದಲಗಳು, ತಪ್ಪುಕಲ್ಪನೆಗಳು ಮನೆಮಾಡಿವೆ. ದೈಹಿಕ ಕಾಯಿಲೆ ಹಾಗೂ ಮಾನಸಿಕ ಕಾಯಿಲೆಗೂ ಪರಸ್ಪರ ಸಂಬಂಧವಿದೆ ಎಂಬ ಅರಿವು ಬೆಳೆದುಬಂದಿಲ್ಲ. ಜನಸಾಮಾನ್ಯರಲ್ಲಿರುವ ತಪ್ಪುಕಲ್ಪನೆಗಳನ್ನು ದೂರ ಮಾಡುವಲ್ಲಿ ಈ ಕೃತಿ ಅತ್ಯಂತ ಉಪಯುಕ್ತವಾಗಿದೆ. ಸ್ಕಿಜೋಫ್ರೇನಿಯಾ, ಖಿನ್ನತೆ ಮತ್ತು ಬೈಪೋಲಾರ್ ಡಿಸಾರ್ಡರ್ ಗಳ ಕುರಿತು ಸಮಗ್ರ ಮಾಹಿತಿಯನ್ನು ಒದಗಿಸುತ್ತದೆ. ಮಾನಸಿಕ ಕಾಯಿಲೆಗಳಿಗೆ ಕೆಲವು ಸೂಕ್ತ ಚಿಕಿತ್ಸೆ ಅತ್ಯಂತ ಅವಶ್ಯಕ ಎಂಬುದನ್ನು 'ತೀವ್ರ ಮಾನಸಿಕ ಕಾಯಿಲೆಗಳು’ ಕೃತಿ ತಿಳಿಸುತ್ತದೆ.

About the Author

ಕೆ.ಎಸ್. ಪವಿತ್ರ

ವೈದ್ಯಕೀಯ ಸಾಹಿತ್ಯ ರಂಗ, ಭರತನಾಟ್ಯ ಕಲಾವಿದೆಯಾಗಿ ಹೆಸರು ಗಳಿಸಿರುವ ಪವಿತ್ರಾ ಕೆ.ಎಸ್ ಅವರು ಮೂಲತಃ ಶಿವಮೊಗ್ಗದವರು. ಆರೋಗ್ಯ ಸಲಹೆಗಳಿಂದ ಉನ್ನತ ಸ್ಥಾನ ಗಳಿಸಿರುವ ಅವರು ವಿಚಾರ ಸಾಹಿತ್ಯದಲ್ಲೂ ಆಸಕ್ತರು.  11ನೇ ವಯಸ್ಸಿನಲ್ಲಿ ಅಖಿಲ ಭಾರತ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಉಪಾಧ್ಯಕ್ಷೆಯಾಗಿದ್ದ ಕೀರ್ತಿ ಅವರದು. ’ಮನ-ಮನನ, ನೀವು ಮತ್ತು ನಿಮ್ಮ ಸಂಬಂಧಗಳು, ಸಿ.ಜಿ.ಯೂಂಗ್, ಓ ಸಖಿ ನೀನು ಸಖಿಯೆ, ಪರಿಪೂರ್ಣ ವ್ಯಕ್ತಿತ್ವ ಇಂದಿನ ಮಹಿಳೆಯ ಮಾನಸಿಕ ಸವಾಲುಗಳು, ಗೀಳು ಖಾಯಿಲೆ, ಮಗು-ಮನಸು’ ಅವರ ಕೃತಿಗಳು. ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಬಹುಮಾನ, ಕಸಾಪ ಧರಣೇಂದ್ರಯ್ಯ ಮನೋವಿಜ್ಞಾನ ದತ್ತಿ ...

READ MORE

Related Books