‘ಟಿಂಗರ್ ಬುಡ್ಡಣ್ಣ’ ಎಂಬುದು ‘ಚಂಪಾ’ ಎಂದೇ ಖ್ಯಾತಿಯ ಚಂದ್ರಶೇಖರ ಪಾಟೀಲ ಅವರ ನಾಟಕ ಕೃತಿ. ಸಾಮಾಜಿಕ ವ್ಯವಸ್ಥೆಯನ್ನು ವಿಡಂಬಿಸುವ ಕೃತಿ ಇದು. ವ್ಯಂಗ್ಯ-ವಿಡಂಬನೆ, ಹಾಸ್ಯ, ಚೋದ್ಯ ಇಂತಹ ನಗೆ ಬರಹಗಳ ವಿವಿಧ ಸೂಕ್ಷ್ಮತೆಗಳನ್ನು ಪದರು ಪದರಾಗಿ ತೋರುವ ‘ಚಂಪಾ’ ಅವರ ಬರಹ- ಚಿಂತನೆಗಳನ್ನು ಈ ನಾಟಕ ಧ್ವನಿಸುತ್ತದೆ.
'ಚಂಪಾ' ಎಂದೇ ಕನ್ನಡ ಸಾಹಿತ್ಯಲೋಕದಲ್ಲಿ ಚಿರಪರಿಚಿತ ಇರುವ ಚಂದ್ರಶೇಖರ ಪಾಟೀಲರು ಕವಿ-ನಾಟಕಕಾರ. ಕನ್ನಡನಾಡಿನ ಸಾಹಿತ್ಯಕ, ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಚಳುವಳಿಗಳ ಮುಂಚೂಣಿಯಲ್ಲಿ ಕೇಳಿಬರುವ ಹೆಸರು ’ಚಂಪಾ’ ಅವರದು. ಹಾವೇರಿ ಜಿಲ್ಲೆಯ ಹತ್ತೀಮತ್ತೂರಿನಲ್ಲಿ ಜನಿಸಿದರು (1939). ತಂದೆ ಬಸವರಾಜ ಹಿರೇಗೌಡ ಪಾಟೀಲ, ತಾಯಿ ಮುರಿಗೆವ್ವ. ಹತ್ತೀಮುತ್ತೂರಿನಲ್ಲಿ ಪ್ರಾಥಮಿಕ, ಮಾಧ್ಯಮಿಕ ಶಾಲಾ ವಿದ್ಯಾಭ್ಯಾಸ, ಹಾವೇರಿಯಲ್ಲಿ ಹೈಸ್ಕೂಲು ಶಿಕ್ಷಣ ಪಡೆದ ಅವರು ಹೆಚ್ಚಿನ ಅಧ್ಯಯನಕ್ಕಾಗಿ ಧಾರವಾಡದ ಕರ್ನಾಟಕ ಕಾಲೇಜು ಸೇರಿದರು. ಕಾಲೇಜಿನಲ್ಲಿದ್ದ ದಿನಗಳಲ್ಲಿಯೇ 'ಚಂಪಾ' ಅವರ ಅಕ್ಷರಗಳಿಗೆ ಕಾವ್ಯದ ಗರಿ ಮೂಡಿದವು. ಆಗ ಖ್ಯಾತ ಕವಿ ಗೋಕಾಕರು ಕರ್ನಾಟಕ ಕಾಲೇಜಿನಲ್ಲಿದ್ದರು. ’ನಮಗೆಲ್ಲ ...
READ MORE