ತೊಟ್ಟಿಲು

Author : ಮೊಗಳ್ಳಿ ಗಣೇಶ್

Pages 100

₹ 120.00




Published by: ಅಂಕಿತ ಪುಸ್ತಕ
Address: #53 ಶಾಮಸಿಂಗ್ ಸಂಕೀರ್ಣ, ಗಾಂಧಿಬಜಾರ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು-560004
Phone: 08026617100

Synopsys

‘ತೊಟ್ಟಿಲು’ ಮೊಗಳ್ಳಿ ಗಣೇಶ್ ಅವರ ಸಣ್ಣ ಕಥೆಗಳ ಸಂಕಲನ. ಇಲ್ಲಿಯ ಕತೆಗಳು ಆಧುನಿಕ ಕಾಲಘಟ್ಟವನ್ನು ಬಹುವಾಗಿ ಹೋಲಿಸುವ ಪಾತ್ರಗಳನ್ನು ಒಳಗೊಂಡಿವೆ. ಪ್ರತೀ ಪಾತ್ರವೂ ಕೂಡ ತನ್ನ ವಿಚಾರಗಳನ್ನು ತನ್ನದೇ ಆದ ರೀತಿಯಲ್ಲಿ ಭಿನ್ನವಾಗಿ ವಿವರಿಸುತ್ತದೆ ಮತ್ತು ಜೀವಂತಿಕೆಯಿಂದ ಕೂಡಿವೆ. ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುತ್ತದೆ. 

About the Author

ಮೊಗಳ್ಳಿ ಗಣೇಶ್
(01 July 1962)

ಕತೆಗಾರ ಮೊಗಳ್ಳಿ ಗಣೇಶ್ ಅವರು ಹುಟ್ಟಿದ್ದು ಚನ್ನಪಟ್ಟಣ ತಾಲ್ಲೂಕಿನ ಸಂತೆಮೊಗೇನಹಳ್ಳಿ. ಬಾಲ್ಯದ ದಿನಗಳನ್ನು ಹಳ್ಳಿಯಲ್ಲಿ ಕಳೆದ ಮೊಗಳ್ಳಿ ಅವರು ತಮ್ಮ ಅನುಭವವನ್ನು ವಿಶಿಷ್ಟ, ವಿನ್ಯಾಸದಲ್ಲಿ ಸೊಗಸಾದ ಕಥೆಗಳನ್ನಾಗಿ ಕಟ್ಟಿಕೊಡಬಲ್ಲರು.  ಕನ್ನಡ ಕಥನ ಪರಂಪರೆಗೆ ಹೊಸತನ ನೀಡಿದ ಅವರು ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದ ಜಾನಪದ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರು.  ಬುಗುರಿ, ಮಣ್ಣು, ಅತ್ತೆ, ಭೂಮಿ, ಕನ್ನೆಮಳೆ (ಕಥಾ ಸಂಕಲನಗಳು), ಮೊಗಳ್ಳಿ ಕಥೆಗಳು (ಆವರೆಗಿನ ಬಹುಪಾಲು ಕಥೆಗಳ ಸಂಕಲನ), ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆಯಲ್ಲಿ ಅವರ ಕಥೆಗಳು ನಾಲ್ಕು ಬಾರಿ ಬಹುಮಾನ ಪಡೆದಿವೆ- ಒಂದು ಹಳೆಯ ಚಡ್ಡಿ (1989), ಬುಗುರಿ (1990), ಬತ್ತ (1991), ...

READ MORE

Related Books