ಹಲವಾರು ವಿಜ್ಞಾನಿಗಳು ತಮ್ಮ ಬೌದ್ಧಿಕ ಸಾಮರ್ಥ್ಯದಿಂದ ನೀಡಿರುವ ಕೊಡುಗೆಯನ್ನು, ಅದರಿಂದ ನಾಡನ್ನು ಪ್ರಗತಿ ಪಥಕ್ಕೆ ಒಯ್ದ ಧೀಮಂತರ ಸಾಧನೆಯ ಹೆಜ್ಜೆಗಳನ್ನು ಕನ್ನಡಿಗರಿಗೆ ಪರಿಚಯಿಸುವ ಪ್ರಯತ್ನ ಈ ಕೃತಿಯಿಂದಾಗಿದೆ.
ಸರ್. ಎಂ.ವಿಶ್ವೇಶ್ವರಯ್ಯನವರು ಒಳಗೊಂಡಂತೆ ಹದಿನೆಂಟು ಮಂದಿ ಸಾಧಕರ ಕೊಡುಗೆಯೊಂದಿಗೆ ಅವರು ನಂಬಿದ್ದ ಮೌಲ್ಯಗಳ ಬಗ್ಗೆ ವಿವಿಧ ಲೇಖಕರು ಬರೆದ ಲೇಖನಗಳು ಇಲ್ಲಿವೆ. ಈ ಕೃತಿಯನ್ನು ವಿಜ್ಞಾನ ಲೇಖಕ ಟಿ.ಆರ್. ಅನಂತರಾಮು ಸಂಪಾದಿಸಿದ್ದಾರೆ.
ಭೂ ವಿಜ್ಞಾನಿ, ಸಂಶೋಧಕ, ಅಂಕಣಕಾರ, ವಿಜ್ಞಾನ ಲೇಖಕ ಟಿ.ಆರ್. ಅನಂತರಾಮು ಅವರು ಜನಿಸಿದ್ದು 1949 ಆಗಸ್ಟ್ 3ರಂದು ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ತಾಳಗುಂದದಲ್ಲಿ.ತಾಳಗುಂದ ರಾಮಣ್ಣ ಅನಂತರಾಮು ಅವರ ಪೂರ್ಣ ಹೆಸರು. ಸಿರಾದ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಮಾಧ್ಯಮಿಕ ಶಿಕ್ಷಣ ಪೂರ್ಣಗೊಳಿಸಿದ ಅವರು ಸಿರಾದ ಮುನಿಸಿಪಲ್ ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ ಪೂರ್ಣಗೊಳಿಸಿದ್ದಾರೆ. ಆನಂತರ ತುಮಕೂರಿನ ಸರ್ಕಾರಿ ಕಾಲೇಜಿನಲ್ಲಿ ಪದವಿ, ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂ.ಎನ್ಸಿ(ಜಿಯಾಲಜಿ) ಪದವಿ ಪಡೆದಿದ್ದಾರೆ. ಭೂ ವಿಜ್ಞಾನ ವಿಷಯದಲ್ಲಿ ಪದವಿ ಪಡೆದ ನಂತನ ಬೆಂಗಳೂರಿನ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ರಾಜ್ಯದ ನಾನಾ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದ್ದಾರೆ. ...
READ MORE