ತುಳು ಸಾಹಿತ್ಯ, ಸಂಸ್ಕೃತಿಯ ಬಗೆಗೆ ಸಂಶೋಧನೆ ನಡೆಸಿರುವ ಪಾದೇಕಲ್ಲು ವಿಷ್ಣು ಭಟ್ ಅವರು ಈ ಕೃತಿಯನ್ನು ರಚಿಸಿದ್ದಾರೆ. ತುಳು ಸಾಹಿತ್ಯಕ್ಕೆ ಸಂಬಂಧಿಸಿ ಬರೆದ ಒಟ್ಟು ಇಪ್ಪತ್ತು ಲೇಖನಗಳು ಈ ಕೃತಿಯಲ್ಲಿವೆ. ತುಳು ಸಾಹಿತ್ಯದ ಬಗೆಗಿನ ತಿಳುವಳಿಕೆಗೆ ಮತ್ತು ಅಧ್ಯಯನಕ್ಕೆ ಇಲ್ಲಿನ ಲೇಖನಗಳು ಉಪಯುಕ್ತವಾಗುತ್ತವೆ.
ಪಾದೇಕಲ್ಲು ವಿಷ್ಣು ಭಟ್ಟ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ 06-02-1956 ರಂದು ಜನಿಸಿದರು. ಇವರ ತಂದೆ ಶ್ರೀ ಪಾದೇಕಲ್ಲು ನಾರಾಯಣ ಭಟ್ಟ, ತಾಯಿ ಶ್ರೀಮತಿ ಶಾರದಾ. ತಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಹುಟ್ಟೂರಿನಲ್ಲಿಯೇ ಪೂರ್ಣಗೊಳಿಸಿದ ಅವರು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪದವಿ ಪಡೆದರು. ಆನಂತರ ಮೈಸೂರು ವಿಶ್ವವಿದ್ಯಾನಿಲಯದಿಂದ ಪ್ರಥಮಸ್ಥಾನದಲ್ಲಿ ಎಂ.ಎ ಪದವಿ ಪಡೆದರು. ‘ಭಾಗವತದ ಯಕ್ಷಗಾನ ಪ್ರಸಂಗಗಳು’ ಎಂಬ ವಿಷಯದ ಮೇಲೆ ಅಧ್ಯಯನ ನಡೆಸಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿಹೆಚ್.ಡಿ. ಪದವಿಯನ್ನು ಪಡೆದರು. ನಂತರ ಕನ್ನಡ ಉಪನ್ಯಾಸಕರಾಗಿ, ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ ...
READ MORE