ಟೈಪಿಸ್ಟ್ ತಿರಸ್ಕರಿಸಿದ ಕಥೆ- ಶಿವಕುಮಾರ್ ಮಾವಲಿ ಅವರ ಕಥಾ ಸಂಕಲನ. ಹೊಸ ತಲೆಮಾರಿನ ಪ್ರತಿಭಾವಂತ ಬರಹಗಾರ ಶಿವಕುಮಾರ್ ಮಾವಲಿಯವರು ಆಧುನಿಕತೆಯ ಕ್ರೌರ್ಯವನ್ನು, ಆಧುನಿಕ ಜಗತ್ತಿನ ತಲ್ಲಣಗಳನ್ನು ಅಚ್ಚುಕಟ್ಟಾಗಿ ವಿವರಿಸುವ ತಮ್ಮದೇ ಶೈಲಿಯಲ್ಲಿ ಕತೆ ಹೇಳುವ ಕಥೆಗಾರ. ಮೊಬೈಲ್, ವಾಟ್ಸ್ ಅಪ್, ಫೇಸ್ ಬುಕ್ ಗಳಿಂದ ಆಗಬಹುದಾದ ಆಘಾತಗಳನ್ನು ಈ ಕಥಾ ಸಂಕಲನದಲ್ಲಿ ವಿವರಿಸಿದ್ದಾರೆ. ಹೊಸ ತಲೆಮಾರು ಸಾಮಾಜಿಕ ಜಾಲತಾಣ ಮತ್ತು ಮೊಬೈಲ್ ವ್ಯಸನಕ್ಕೆ ಒಳಗಾಗಿ ತಮ್ಮ ಬದುಕನ್ನೇ ಕೊನೆಗೊಳಿಸಿಕೊಳ್ಳುತ್ತಿರುವ ದುರಂತವನ್ನು, ಜೊತೆಗೆ ಡಿಜಿಟಲ್ ಲೋಕ ಪ್ರತಿಯೊಬ್ಬರ ಖಾಸಗೀತವನ್ನೂ ಬಂಡವಾಳವಾಗಿಸಿಕೊಂಡು ದುರಂತಗಳಿಗೆ ದಾರಿ ಮಾಡಿಕೊಡುತ್ತಿರುವುದರ ಬಗ್ಗೆಯೂ ಈ ಪುಸ್ತಕ ಧ್ವನಿ ಎತ್ತುತ್ತದೆ.
ಶಿವಕುಮಾರ್ ಮಾವಲಿ ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಮಾವಲಿಯವರು. ಶಿವಮೊಗ್ಗದ ಡಿ.ವಿ.ಎಸ್. ಹಾಗೂ ಸಹ್ಯಾದ್ರಿ ಕಾಲೇಜಿನಲ್ಲಿ ಪದವಿ ಶಿಕ್ಷಣ ಮುಗಿಸಿದ ಅವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂಗ್ಲೀಷ್ ಸಾಹಿತ್ಯದಲ್ಲಿ ಎಂ.ಎ.ಪದವಿ ಪಡೆದಿದ್ದಾರೆ. ಸದ್ಯ ಇಂಗ್ಲೀಷ್ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಶಿವಕುಮಾರ್ ಪ್ರತಿಭಾವಂತ ಬರಹಗಾರ. ಕಥೆ, ಕವಿತೆ, ನಾಟಕ ಹೀಗೆ ಸಾಹಿತ್ಯದ ಹಲವು ವಿಭಾಗಗಳಲ್ಲಿ ತಮ್ಮದೇ ಛಾಪು ಮೂಡಿಸಿರುವ ಶಿವಕುಮಾರ್ ಅವರ ಮೊದಲ ಕಥಾಸಂಕಲನ ‘ದೇವರು ಅರೆಸ್ಟ್ ಆದ’ ಅವರ ‘ಸುಪಾರಿ ಕೊಲೆ’ ನಾಟಕ ಸಿನಿಮವಾಗುತ್ತಿದೆ. ಅವರ ಇತ್ತೀಚಿನ ಪುಸ್ತಕ ಟೈಪಿಸ್ಟ್ ತಿರಸ್ಕರಿಸಿದ ಕಥೆ. ಈ ಕೃತಿಯನ್ನು ಬಹುರೂಪಿ ...
READ MORE