ಕನ್ನಡದ ಪ್ರಮುಖ ಸಾಹಿತಿಗಳ ಪೈಕಿ ಯು. ಆರ್. ಅನಂತಮೂರ್ತಿ ಒಬ್ಬರು. 994ರಲ್ಲಿ ತಮ್ಮ ಸಮಗ್ರ ಸಾಹಿತ್ಯಕ್ಕಾಗಿ ಜ್ಞಾನಪೀಠ ಪ್ರಶಸ್ತಿ ಪಡೆದರು. ಅವರ ಬದುಕು-ಬರಹಗಳೆರಡನ್ನೂ ಸಂಕ್ಷಿಪ್ತವಾಗಿ ಪರಿಚಯಿಸುವ ಪ್ರಯತ್ನವನ್ನು ಲೇಖಕ ಟಿ.ಎಸ್. ಗೋಪಾಲ್ ಅವರು ಮಾಡಿದ್ದಾರೆ. ಮಕ್ಕಳನ್ನು ಗಮನದಲ್ಲಿ ಇಟ್ಟುಕೊಂಡು ಸಿದ್ಧಪಡಿಸಿದ ಕೃತಿ.
ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...
READ MORE