‘ಉನ್ನತ ಸರಸ್ವತಿ’ ಮಾಧವ ಕುಲಕರ್ಣಿ ಅವರ ಕಾದಂಬರಿಯಾಗಿದೆ. ಗುರು-ಶಿಷ್ಯ ಪರಂಪರೆಗೆ ಒಂದು ಗೌರವ ಸ್ಥಾನವನ್ನು ತಂದುಕೊಟ್ಟಿದ ಭಾರತೀಯ ಕಲಿಕಾ ವಿಧಾನವನ್ನು ಇಂದಿನ ಉನ್ನತ ಶಿಕ್ಷಣ ವ್ಯವಸ್ಥೆಯೊಂದಿಗೆ ತಾಳೆ ನೋಡುವ ಪ್ರಯತ್ನ. ಸಂಪೂರ್ಣ ವ್ಯಾಪಾರೀಕರಣಗೊಂಡು ದುರಂತದ ಹಾದಿ ಹಿಡಿದ ಉನ್ನತ ವ್ಯಾಸಂಗವನ್ನು ಗೇಲಿ ಮಾಡುತ್ತ ನಾವೆಲ್ಲಿ ಸೋತಿರಬಹುದೆಂದು ನಮಗೆ ಜ್ಞಾಪಿಸುವ ಕಾದಂಬರಿ.
ಲೇಖಕ, ವಿಮರ್ಶಕ ಮಾಧವ ಕುಲಕರ್ಣಿ ಅವರು ಈಗಿನ ಗದಗ ಜಿಲ್ಲೆ ಮತ್ತು ಆಗಿನ ಧಾರವಾಡ ಜಿಲ್ಲೆಯವರು. ಪ್ರಾಥಮಿಕ ಶಿಕ್ಷಣದಿಂದ ಎಸ್.ಎಸ್.ಎಲ್.ಸಿ ವರೆಗೆ ಕನ್ನಡ ಮಾಧ್ಯಮದಲ್ಲಿ ಪೂರೈಸಿರುವ ಅವರು ಹೈಸ್ಕೂಲು ಶಿಕ್ಷಣವನ್ನು ವಿದ್ಯಾದಾನ ಸಮಿತಿ ಹೈಸ್ಕೂಲು ಗದಗದಲ್ಲಿ ಪೂರ್ಣಗೊಳಿಸಿದ್ದಾರೆ. ತಂದೆ ಎ.ವಿ. ಕುಲಕರ್ಣಿ ಗದುಗಿನ ಮುನ್ಸಿಪಲ್ ಹೈಸ್ಕೂಲಿನಲ್ಲಿ ಶಿಕ್ಷಕರಾಗಿದ್ದರು. ಅಲ್ಲದೇ ಹೈಸ್ಕೂಲು ಶಿಕ್ಷಣದಲ್ಲಿ ಮುಖ್ಯೋಪಾಧ್ಯಾಯರಾಗಿದ್ದ ಕೆ.ಎಸ್.ಎಸ್. ಅಯ್ಯಂಗಾರ್ ಅವರ ಆಡಳಿತ ಕ್ರಮ ಮತ್ತು ಶಿಸ್ತು ನನ್ನ ಮೇಲೆ ಪ್ರಭಾವ ಬೀರಿದವು ಎನ್ನುತ್ತಾರೆ ಮಾಧವ ಕುಲಕರ್ಣಿ. ಗದುಗಿನ ಜೆ.ಟಿ. ಕಾಲೇಜಿನಿಂದ ಕಲಾ ವಿಭಾಗದಲ್ಲಿ ಪದವಿ, ಕರ್ನಾಟಕ ವಿಶ್ವವಿದ್ಯಾಲಯದಿಂದ 1968ರಲ್ಲಿ ಸ್ನಾತಕೋತ್ತರ ...
READ MORE