ಡಿ.ಆರ್. ನಾಗರಾಜ್ ಅವರ ದಿ ಪ್ಲೇಮಿಂಗ್ ಫೀಟ್ ಕೃತಿಯ ಕನ್ನಡಾನುವಾದ ‘ಉರಿ ಚಮ್ಮಾಳಿಗೆ’. ಈ ಕೃತಿಯನ್ನು ಲೇಖಕಿ ಎಂ.ಎಸ್. ಆಶಾದೇವಿ ಕನ್ನಡೀಕರಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ನೂರರ ಸಂಭ್ರಮಕ್ಕೆ ರೂಪಿಸಲಾಗಿದ್ದ ಕನ್ನಡದ ನೂರು ಮೌಲಿಕ ಗ್ರಂಥಗಳ ಮರುಮುದ್ರಣದ ವೇಳೆ ಆಯ್ಕೆಯಾಗಿ ಪ್ರಕಟಗೊಂಡ ಕೃತಿ ಇದು.
ಕನ್ನಡ ಸಾಹಿತ್ಯ ಪರಿತ್ತು ಈ ಪುಸ್ತಕವನ್ನು 2015 ರಲ್ಲಿ ಪ್ರಕಟಿಸಿತ್ತು.
ಅನುವಾದಕಿ, ವಿಮರ್ಶಕಿ ಆಶಾದೇವಿ ಅವರು 1966 ಫೆಬ್ರವರಿ 26 ದಾವಣಗೆರೆ ಜಿಲ್ಲೆಯ ನೇರಳಿಗೆಯಲ್ಲಿ ಜನಿಸಿದರು. ತಂದೆ ಸೋಮಶೇಖರ್, ತಾಯಿ ಅನಸೂಯಾ. ಚನ್ನಗಿರಿ ಸಮೀಪದ ಹಿರೇಕೋಗಲೂರಿನವರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ. ಡಿ.ಆರ್.ನಾಗರಾಜ್ ಮಾರ್ಗದರ್ಶನದಲ್ಲಿ ನವೋದಯ ವಿಮರ್ಶೆ ಮೇಲೆ ಪಾಶ್ಚಾತ್ಯ ವಿಮರ್ಶೆಯ ಪ್ರಭಾವ ಕುರಿತು ಪಿ.ಎಚ್ಡಿ. ಸ್ತ್ರೀಮತವನುತ್ತರಿಸಲಾಗದೇ(ಸಾಹಿತ್ಯ ಸಂಸ್ಕೃತಿ ಕುರಿತ ಲೇಖನಗಳು) ಉರಿಚಮ್ಮಾಳಿಗೆ(ಡಿ.ಆರ್.ನಾಗರಾಜ ಅವರ ದಿ ಪ್ಲೇಮಿಂಗ್ ಫೀಟ್ ಕೃತಿಯ ಅನುವಾದ). ವಚನ ಪ್ರವೇಶ( ಸಂಪಾದನೆ). ಭಾರತದ ಬಂಗಾರ ಪಿ.ಟಿ.ಉಷಾ, ಇವರ ಪ್ರಮುಖ ಕೃತಿಗಳು. ವಿವಿಧ ಸೆಮಿನಾರುಗಳಲ್ಲಿ ಪ್ರಬಂಧ ಮಂಡನೆ. ಪ್ರಸ್ತುತ ಬೆಂಗಳೂರಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕಿಯಾಗಿ ...
READ MORE