ಮಧ್ಯಮ ವರ್ಗದವರ ಅಸ್ಥಿರದ ಬದುಕನ್ನು ಮುಖಾಮುಖಿಯಾಗಿಸುವ ಕತೆಗಳು ಇಲ್ಲಿವೆ. ಮೂಲ ವಾಸಸ್ಥಾನ ತೊರೆದು ಬೆಂಗಳೂರಿನಂತಹ ಅಪರಿಚಿತ ಹಾಗೂ ಬಹುಸಂಸ್ಕೃತಿಯ ಊರಿನಲ್ಲಿ ಬದುಕು ಕಟ್ಟಿಕೊಳ್ಳುವವರ ಹೋರಾಟ, ಪಾಡು-ತಲ್ಲಣ, ಜೀವನ, ಕನಸು, ನೈತಿಕ- ಅನೈತಿಕ ದ್ವಂದ್ವ ಎಲ್ಲವೂ ಹಾಸು ಹೊಕ್ಕಾಗಿ ಓದುಗರನ್ನು ಎದುರುಗೊಳ್ಳುತ್ತವೆ. ಮಾನಸಿಕ ಕಲಹದ ಇಲ್ಲಿಯ ಕತೆಗಳು, ಸಂಚಲನ ಸೃಷ್ಟಿಸಿ, ಸುಗಮವಾಗಿ ಓದಿಸಿಕೊಳ್ಳುತ್ತವೆ.
ಪದ್ಮಿನಿ ನಾಗರಾಜು ಅವರು ಮೈಸೂರು ಜಿಲ್ಲೆಯ ಸಾಲಿಗ್ರಾಮದವರು. ಗಂಗಾವತಿ, ಚಿಕ್ಕಮಗಳೂರಿನಲ್ಲಿ ವಿದ್ಯಾಭ್ಯಾಸ. ಸ್ನಾತಕೋತ್ತರ ಹಾಗೂ ಪಿಎಚ್.ಡಿ ಪದವಿ ಪಡೆದದ್ದು ಮೈಸೂರು ವಿಶ್ವವಿದ್ಯಾಲಯದಲ್ಲಿ. ಪ್ರಸ್ತುತ 'ರಾಣಿ ಸರಳಾದೇವಿ ಕಾಲೇಜಿನಲ್ಲಿ ಪ್ರಾಧ್ಯಾಪಕಿ ಹಾಗೂ ‘ಕೇಂದ್ರ ಸಾಹಿತ್ಯ ಅಕಾಡೆಮಿ'ಯ ಸಲಹಾ ಸಮಿತಿಯ ಸದಸ್ಯರಾಗಿದ್ದಾರೆ. ಅವರ ಅನೇಕ ಲೇಖನ, ಕಥೆ, ಕವಿತೆಗಳು ಕನ್ನಡ ದಿನ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಅಂಕಣಕಾರ್ತಿಯಾಗಿಯು ಗುರುತಿಸಿಕೊಂಡಿದ್ದಾರೆ. 'ಗೆಳತಿಯಾಗುವುದೆಂದರೆ' (ಕವನ ಸಂಕಲನ), 'ಸಮಾಧಿ ಮೇಲಿನ ಹೂ' (ಕಥಾ ಸಂಕಲನ), 'ಅವ್ವ' (ಲಂಕೇಶರ ಆತ್ಮಚರಿತ್ರೆಯನ್ನು ಆಧರಿಸಿದ ನಾಟಕ), 'ಅರಿವಿನ ಮಾರ್ಗದ ಸೋಪಾನಗಳು-ಅನುಪ್ರೇಕ್ಷೆಗಳು' (ಸಂಶೋಧನೆ), ಕೃಷ್ಣಮೂರ್ತಿ ಕವತ್ತಾರ (ವ್ಯಕ್ತಿಚಿತ್ರ), ಸಮತ್ವ (ಪ್ರಬಂಧ ಸಂಕಲನ) ...
READ MORE