ಖ್ಯಾತ ಲೇಖಕ ವಿಮರ್ಶಕ ಎಸ್. ದಿವಾಕರ ಅವರು ಕನ್ನಡಕ್ಕೆ ಅನುವಾದಿಸಿರುವ ಕೃತಿ-ಉತ್ತರ ದಕ್ಷಿಣ ದಿಕ್ಕುಗಳನ್ನು ಬಲ್ಲವನು. ಕೃತಿಗೆ ನೀಡಿರುವ ಉಪಶೀರ್ಷಿಕೆಯನ್ವಯ, ಈ ಕೃತಿಯಲ್ಲಿ ಹಲವು ದೇಶಗಳ ಹಲವು ಕಥೆಗಳನ್ನು ಸಂಕಲಿಸಿದ್ದಾರೆ. ಪ್ರತಿ ಕಥೆಯು ವಿಷಯ ವಸ್ತುವಿನಿಂದ ವೈವಿಧ್ಯಮಯವಾಗಿವೆ. ನಿರೂಪಣಾ ಶೈಲಿಯು ಸಹ ಆಕರ್ಷಣೆಯಾಗಿದೆ. ಹಲವು ದೇಶಗಳ ವೈವಿಧ್ಯಮಯ ಸಂಸ್ಕೃತಿಯನ್ನು, ವೈಚಾರಿಕ ಗತಿಯನ್ನು ಪರಿಚಯಿಸುತ್ತವೆ.
ಎಸ್. ದಿವಾಕರ್ ಅವರು 28 ನವೆಂಬರ್ 1944 ರಲ್ಲಿ ಜನಿಸಿದರು. ಹುಟ್ಟಿದ್ದು ಬೆಂಗಳೂರು ಜಿಲ್ಲೆಯ ಸೋಮತ್ತನಹಳ್ಳಿಯಲ್ಲಿ. ಸಣ್ಣಕಥೆ, ಕಾವ್ಯ, ಪ್ರಬಂಧ, ವಿಮರ್ಶೆ, ಅಂಕಣ ಬರಹ, ಭಾಷಾಂತರ, ಸಂಪಾದನೆ ಇವೆಲ್ಲದರಲ್ಲಿ ಸ್ವೋಪಜ್ಞತೆ ಮತ್ತು ವಿಶಿಷ್ಟತೆ ಮೆರೆದಿರುವ ಎಸ್. ದಿವಾಕರ್, ಸವಿಸ್ತಾರ ಓದಿನ ಜಾಗೃತ ಮನಸ್ಸಿನ ಲೇಖಕರು. ಸುಧಾ, ಪ್ರಜಾವಾಣಿ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಅಮೆರಿಕನ್ ಕಾನ್ಸುಲೇಟ್ ಕಚೇರಿಯಲ್ಲಿ ಕನ್ನಡ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಪ್ರಕಟಿತ ಕೃತಿಗಳಾದ ಇತಿಹಾಸ, ಎಲ್ಲ ಬಲ್ಲವರಿಲ್ಲ ಈ ಊರಿನಲ್ಲಿ ಆಯ್ದ ಕತೆಗಳು (ಕಥಾ ಸಂಕಲನಗಳು), ಆತ್ಮಚರಿತ್ರೆಯ ಕೊನೆಯ ಪುಟ (ಕವನ ಸಂಕಲನ), ನಾಪತ್ತೆಯಾದ ಗ್ರಾಮಾಫೋನು, ಕೃಷ್ಣಲೀಲೆಯಿಂದ ರಾಮರಾಜ್ಯಕ್ಕೆ ...
READ MORE