'ಯಾವುದು ಒಳ್ಳೆಯ ಸಾಹಿತ್ಯ, ಯಾವುದು ಸಾಮಾನ್ಯದ್ದು ಎನ್ನುವ ಅಳತೆಗೋಲು ಇಲ್ಲ, ನಿಜ. ಹೆಚ್ಚಿನಮಟ್ಟಿಗೆ ಅದು ನಮ್ಮ ನಮ್ಮ ಅನುಭವಕ್ಕೆ ಬರಬೇಕಾದ ಸಂಗತಿ. ಕೆಲವು ಓದುಗರು ಓದುತ್ತ ಬೆಳೆಯುತ್ತಾರೆ. ಆದರೆ ದಿನವೂ ಪತ್ರಿಕೆಗಳನ್ನಷ್ಟೇ ಓದುವ ವ್ಯಕ್ತಿಗಳ ಕುರಿತು ಯೋಚಿಸಿ ನೋಡಿ. ಅವರು ಅಷ್ಟಕ್ಕೆ ತೃಪ್ತರಾಗುತ್ತಾರೆ. ಅಲ್ಲದೆ ಇಲ್ಲೊಂದು ಅಪಾಯವೂ ಇದೆ: ಗ್ರೆಶರ್ ಲಾ! ಕೆಟ್ಟ ಹಣ ಒಳ್ಳೆಯ ಹಣವನ್ನು ಕೊಚ್ಚಿಕೊಂಡು ಹೋಗುವಂತೆ, ಸಾಮಾನ್ಯ ಸಾಹಿತ್ಯ ಉತೃಷ್ಟ ಸಾಹಿತ್ಯವನ್ನು ಒತ್ತರಿಸಬಹುದು. ಆಗ ನಮಗೆ ಶೇಕ್ಸ್‌ಪಿಯರ್ ಓದುವುದಕ್ಕೆ ಆಗುವುದಿಲ್ಲ. ಯಾಕೆ ಓದಬೇಕು? ಪಂಪ ರನ್ನರು ನಮಗೆ ಇಂದು ಯಾಕೆ ಬೇಕು? ಎಂದು ಮುಂತಾದ ಮಾತುಗಳು ಕೇಳಿಬರುತ್ತದೆ. ಇಂದಿನ ಅತಿವೇಗದ ಯುಗದಲ್ಲಿ ಈ ಅಪಾಯ ಇನ್ನಷ್ಟು ತೀವ್ರವಾಗಿದೆ. ಇಂಥ ಹಿನ್ನೆಲೆಯಲ್ಲಿ ಸಾಹಿತ್ಯದ ಸಮಾಧಾನಕರ ಓದಿಗೆ- ತಕ್ಷಣದ ತುರ್ತನ್ನು ಮೀರಿ ಇನ್ನೊಂದು ವಲಯಕ್ಕೆ ನಮ್ಮನ್ನು ಒಯ್ಯುವ ಜಾದುವಿಗೆ - ಈ 'ವಾಚನಶಾಲೆ' ಅಗತ್ಯವಿದೆ ಎಂದು ಕೃತಿಯಲ್ಲಿ ಹೇಳಲಾಗಿದೆ.
©2024 Book Brahma Private Limited.