ಡಾ. ಯು.ಆರ್. ಅನಂತಮೂರ್ತಿ ಅವರು ಇಲ್ಲಿ ಪ್ರಮುಖವಾದ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿ, ವಿಚಾರ ಚಿಂತನೆ ಮಾಡುವಂತೆ ಲೇಖನಗಳನ್ನು ಬರೆದಿದ್ದಾರೆ. ಇವು ಪ್ರತಿನಿತ್ಯ ಬದುಕಿನಲ್ಲಿ ಎದುರಾಗುವಂತಹ ವಸ್ತು-ಸಾಮಗ್ರಿಗಳಾಗಿವೆ. ಬದುಕಿನ ವೈವಿಧ್ಯಗಳೆಂದು ಪರಿಗಣಿಸಿದರೆ ಸತ್ಯವನ್ನು ನಾವು ಕಾಣುವುದಕ್ಕಿಂತ ಭಿನ್ನವಾಗಿ ಕಾಣಬಹುದಾಗಿದೆ. ಸಮಕಾಲೀನ ಸಮಸ್ಯೆಗಳನ್ನು ಉಲ್ಲೇಖಿಸುತ್ತಾ ಚರ್ಚಿಸಬೇಕಾದ ವಿಷಯಗಳಿಗೆ ವಿವರಣೆಯನ್ನು ನೀಡುವ ಲೇಖನಗಳಿವು.
ಕಥೆ-ಕಾದಂಬರಿ ಮತ್ತು ವೈಚಾರಿಕ ಚಿಂತನೆಗಳ ಮೂಲಕ ಕನ್ನಡ- ಭಾರತದ ಸಾಹಿತ್ಯ-ಸಾಂಸ್ಕೃತಿಕ ಚಿಂತನೆಯನ್ನು ಶ್ರೀಮಂತಗೊಳಿಸಿದವರು ಯು.ಆರ್. ಅನಂತಮೂರ್ತಿ. ತಂದೆ ಉಡುಪಿ ರಾಜಗೋಪಾಲಾಚಾರ್ಯ ತಾಯಿ ಸತ್ಯಮ್ಮ. ತೀರ್ಥಹಳ್ಳಿಯ ಮೇಳಿಗೆಯಲ್ಲಿ 1932ರ ಡಿಸೆಂಬರ್ 21 ಜನಿಸಿದರು. ದೂರ್ವಾಸಪುರದಲ್ಲಿ ಸಾಂಪ್ರದಾಯಿಕ ಪದ್ಧತಿಯಲ್ಲಿ ಸಂಸ್ಕೃತ ಕಲಿತು ಶಾಲಾ ಶಿಕ್ಷಣವನ್ನು ತೀರ್ಥಹಳ್ಳಿಯಲ್ಲಿ ಪಡೆದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಪದವಿ ಗಳಿಸಿದರು. ಬರ್ಮಿಂಗ್ ಹ್ಯಾಂ ವಿಶ್ವವಿದ್ಯಾಲಯದಲ್ಲಿ ಪಿಎಚ್ ಡಿ (1966) ಪದವಿ ಪಡೆದರು. ಹಾಸನದ ಕಾಲೇಜಿನಲ್ಲಿ ಅಧ್ಯಾಪಕ (1956) ರಾದ ಇವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ನಂತರ ಕೇರಳದ ಮಹಾತ್ಮಗಾಂಧಿ ವಿಶ್ವವಿದ್ಯಾಲಯದ ಕುಲಪತಿ (1987-91) ಗಳಾಗಿ ...
READ MORE