ಸಮಗ್ರ ವಚನ ಸಾಹಿತ್ಯವನ್ನು ಬೇರೆ ಭಾಷೆಗಳಿಗೆ ಅನುವಾದಿಸುವ ದೃಢ ನಿಶ್ಚಯ ಕೈಗೊಂಡ ಡಾ.ಎಂ.ಎಂ. ಕಲಬುರ್ಗಿ ಅದಕ್ಕಾಗಿ ಬಸವ ಸಮಿತಿಯೊಡನೆ ಸೇರಿ ಯೋಜನೆಯೊಂದನ್ನು ರೂಪಿಸಿದರು.
ಅನುವಾದಕ್ಕೆ ಒಂದು ಮೂಲಪಠ್ಯ ಅಗತ್ಯವಿತ್ತು. ಹಾಗೆ ಕಲಬುರ್ಗಿ ಅವರ ಸಂಪಾದಕತ್ವದಲ್ಲಿ ಮೂಡಿಬಂದ ಮೂಲಪಠ್ಯವೇ ’ವಚನ’ ಸಂಪುಟ. ೧೨ರಿಂದ ೧೮ನೇ ಶತಮಾನದವರೆಗಿನ ಒಟ್ಟು ೨೧ ಸಾವಿರ ವಚನಗಳಲ್ಲಿ ಜಗತ್ ಮನ್ನಣೆ ಪಡೆದಂತಹವುಗಳನ್ನು ಕೃತಿಯಲ್ಲಿ ನೀಡಲಾಗಿದೆ. ವಿವಿಧ ಹಂತಗಳ ಪರಿಷ್ಕಾರದ ನಂತರ ೨೫೦೦ ವಚನಗಳನ್ನು ಒಟ್ಟಿಗೆ ಕೃತಿಯಲ್ಲಿ ಪ್ರಕಟಿಸಲಾಗಿದೆ.
ಕರ್ನಾಟಕದಲ್ಲಿ ಸಂಶೋಧನಾ ಕ್ಷೇತ್ರದ ಪ್ರಮುಖ ಹೆಸರು ಎಂ.ಎಂ. ಕಲಬುರ್ಗಿ. ಶಾಸನಶಾಸ್ತ್ರ, ಸಾಹಿತ್ಯ ಚರಿತ್ರೆ, ಛಂದಸ್ಸು, ಇತಿಹಾಸ, ವಾಸ್ತುಶಿಲ್ಪ, ಗ್ರಂಥಸಂಪಾದನೆ, ಹಸ್ತಪ್ರತಿಶಾಸ್ತ್ರ, ಜಾನಪದ, ಸ್ಥಳನಾಮಗಳ ಅಧ್ಯಯನ, ಸಾಹಿತ್ಯ ವಿಮರ್ಶೆ ಕ್ಷೇತ್ರಗಳಲ್ಲಿ ಹರಡಿಕೊಂಡಿವೆ. ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿಯವರು ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯರಗಲ್ಲ ಗ್ರಾಮದಲ್ಲಿ 1938ರ ನವೆಂಬರ್ 28ರಂದು ಜನಿಸಿದರು. ತಾಯಿ ಗುರಮ್ಮ; ತಂದೆ ಮಡಿವಾಳಪ್ಪ. ಕಲಬುರ್ಗಿಯವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ (1960) ಮತ್ತು ಎಂ.ಎ (1962) ಪದವಿ ಪಡೆದ ಅವರು ಸಲ್ಲಿಸಿದ ‘ಕವಿರಾಜಮಾರ್ಗ ಪರಿಸರದ ಕನ್ನಡ ಸಾಹಿತ್ಯ’ (1968) ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ. ಪದವಿ ಸಂದಿತ್ತು. ಕರ್ನಾಟಕ ಕಾಲೇಜಿನಲ್ಲಿ ...
READ MORE