ಲೇಖಕ ಡಾ. ನಾಗಪ್ಪ ಟಿ. ಗೋಗಿ ಅವರ ಸಂಪಾದಿತ ಕೃತಿ- ವಚನಕಾರರ ಆಯ್ದ ವಚನಗಳು. ಬಸವಣ್ಣ, ಅಂಬಿಗರ ಚೌಡಯ್ಯ, ಅಲ್ಲಮಪ್ರಭು, ಚೆನ್ನಬಸವಣ್ಣ, ದೇವರ ದಾಸಿಮಯ್ಯ ಹೀಗೆ ಆಯ್ದ ವಚನಕಾರರ ವಚನಗಳನ್ನು ಆಯ್ದು ಸಂಗ್ರಹಿಸಲಾದ ಈ ಕೃತಿಯಲ್ಲಿ ಬಹುತೇಕ ವಚನಗಳು ವಿಚಾರಕ್ರಾಂತಿಗೆ ಆಹ್ವಾನ ನೀಡುವಂತಿವೆ.
ಲೇಖಕ ಡಾ. ನಾಗಪ್ಪ ಟಿ. ಗೋಗಿ ಅವರು ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದವರು. ತಂದೆ ತಿಪ್ಪಣ್ಣ, ತಾಯಿ ಯಂಕಮ್ಮ. ತಂದೆ-ತಾಯಿಯ ಪ್ರೀತಿಯಿಂದ ವಂಚಿತರಾದ ಇವರು ಅಣ್ಣನ ಆಸರೆಯಲ್ಲಿ ಬೆಳೆದರು. ಸೋದರಮಾವನ ನೆರವಿನಿಂದ ಬಾಗಲಕೋಟೆಯಲ್ಲಿ ಪ್ರಾಥಮಿಕ ಶಿಕ್ಷಣ, ನಂತರ ಗೋಗಿಯಲ್ಲಿ ಪ್ರೌಢಶಿಕ್ಷಣದಿಂದ ಪದವಿ ಶಿಕ್ಷಣ ಪೂರೈಸಿದರು. ಗುಲಬರ್ಗಾ ವಿವಿಯಿಂದ ಎಂ.ಎ. ಶಿಕ್ಷಣ ಪಡೆದರು. ಲಿಂಗಣ್ಣ ಸತ್ಯಂಪೇಟೆ ಜೀವನ ಕುರಿತು ಎಂ.ಫಿಲ್ ಹಾಗೂ ಅಂಬಿಗರ ಚೌಡಯ್ಯ ಜೀವನ ಹಾಗೂ ವಚನ ಸಾಹಿತ್ಯ ಕುರಿತು ಪಿಎಚ್ ಡಿ ಪೂರೈಸಿದರು. ಸುರಪುರ ತಾಲೂಕಿನ ಕೆಂಭಾವಿ ಹಾಗೂ ಬೀದರ ಜಿಲ್ಲೆಯ ಹುಮನಾಬಾದ ಸರ್ಕಾರಿ ಪ್ರಥಮ ದರ್ಜೆ ...
READ MORE