ಲೇಖಕ ಸು. ರುದ್ರಮೂರ್ತಿ ಶಾಸ್ತ್ರಿ ಅವರ ಕೃತಿ-ವಚನಕಾರರು. 12ನೇ ಶತಮಾನದ ಶಿವಶರಣರನ್ನು ಮಕ್ಕಳಿಗೆ ಸರಳವಾಗಿ ಪರಿಚಯಿಸುವ ಉದ್ದೇಶದ ಕೃತಿ ಇದು. ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ಸೊನ್ನಲಗಿ ಸಿದ್ಧರಾಮ, ಅಂಬಿಗರ ಚೌಡಯ್ಯ ಸೇರಿದಂತೆ ಇತರೆ ಶರಣರ ವಚನಗಳನ್ನು ಹಾಗೂ ಅವುಗಳ ವಿವರಣೆಸಹಿತ ನೀಡಿದ್ದು, ಮಕ್ಕಳೂ ಸುಲಭವಾಗಿ ಅರ್ಥೈಸಿಕೊಳ್ಳಬಹುದು.
ಲೇಖಕ ರುದ್ರಮೂರ್ತಿ ಶಾಸ್ತ್ರಿ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಗ್ಗನಹಳ್ಳಿಯವರು. ತಂದೆ-ಎಸ್.ಎನ್. ಶಿವರುದ್ರಯ್ಯ, ತಾಯಿ- ಸಿದ್ಧಗಂಗಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟೂರಿನಲ್ಲಿ , ಪ್ರೌಢಶಾಲೆಯನ್ನು ರಾಮನಗರದಲ್ಲಿ ಪೂರ್ಣಗೊಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವೀಧರರು. ಬೆಂಗಳೂರಿನ ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಂತರ ವೃತ್ತಿಗೆ ರಾಜೀನಾಮೆ ನೀಡಿ ಸಾಹಿತ್ಯ ಸೇವೆಯಲ್ಲಿ ತೋಡಗಿ, ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ‘ಭಾವ ಲಹರಿ’, ಪರಿ, ಅಂತರಂಗ-ಬಹಿರಂಗ, ಚಿತ್ರಕಲ್ಪನೆ, ರಾಗ, ನಾಡಗೀತೆಗಳು, ನಾದರೂಪಕ ಕವನ ಸಂಕಲನಗಳು. ಪ್ರಾಸ-ಪ್ರಯಾಸ, ಕೆಂಪಭಾರತಂ, ಕೆಂಪರಾಮಾಯಣಂ, ಕೆಂಪನ ವಚನಗಳು, ಅಲ್ಪಜ್ಞನ ವಚನಗಳು ಮುಂತಾದ ಹಾಸ್ಯ ಸಂಕಲನಗಳು ಸೇರಿ ಸುಮಾರು ...
READ MORE