ಖ್ಯಾತ ಸಂಶೋಧಕ ಡಾ. ಹಂಪ ನಾಗರಾಜಯ್ಯ ಅವರ ಕೃತಿ-ವಡ್ಡಾರಾಧನೆ ಮರು ಓದು. ಕನ್ನಡ ಸಾಹಿತ್ಯದ ಮೊದಲ ಗದ್ಯ ಕೃತಿ ವಡ್ಡಾರಾಧನೆ. ಶಿವಕೋಟ್ಯಾಚಾರ್ಯರ ರಚನೆಯಾಗಿದ್ದು, ಲೇಖಕರು ಕೃತಿ ಸಂಪಾದಕರು. ಇದು ಹಳೆಕನ್ನಡದ ಸುಂದರ ಗದ್ಯ ಕಾವ್ಯ. ಈ ಕಥಾ ಗ್ರಂಥದಲ್ಲಿ19 ಮಹಾತ್ಮರ ಜೀವನ ಕಥೆಗಳಿವೆ. ಕಥಾಕೋಶವೆಂದೇ ಈ ಗ್ರಂಥ ಪ್ರಸಿದ್ದವಾಗಿದೆ. ಈ ಕಾವ್ಯವು 10 ನೇ ಶತಮಾನದ ನಂತರದಲ್ಲಿಯೇ ರಚಿತವಾಗಿರಬೇಕೆಂದು ವಿಮರ್ಶಕರು ತಿಳಿದಿದ್ದಾರೆ. ವಡ್ಡಾರಾಧನೆ ಎಂದರೆ ವೃದ್ದರ, ಜ್ಞಾನಿಗಳ, ಜೈನ ಯತಿಗಳ ಜೀವನ ಸಾಧನೆಗಳಿಗೆ ಕೊಡುವ ಗೌರವವಾಗಿರುವದು.ಈ ವಡ್ಡಾರಾಧನೆಯ ಕಥೆಗಳಲ್ಲಿ ಜೀವ ತುಂಬಿದ ಶಿವಕೋಟ್ಯಾಚಾರ್ಯ ಬೇರೆ ಬೇರೆ ರೀತಿಯಿಂದ ಕಥೆಯನ್ನು ಹೇಳಿದ್ದಾನೆ. ನೀತಿ, ಚರಿತ್ರೆ, ಧರ್ಮ, ವ್ಯವಹಾರ ಹೀಗೆ ಹಲವು ವಿಷಯಗಳು ಈ ಕಥೆಗಳಲ್ಲಿವೆ. ಧಾರ್ಮಿಕ ಉದ್ದೇಶದಿಂದ ರಚಿತವಾದ ಈ ಕೃತಿ ಹಳೆಗನ್ನಡದ ಒಂದು ಉತ್ತಮ ಕೃತಿಯಾಗಿರುವುದು.ಇದು ಒಂದು ಅದ್ಭುತ ಕಾವ್ಯ.
©2025 Book Brahma Private Limited.