ಕಥೆಗಾರ, ಬರಹಗಾರರಾದ ವಸುಧೇಂದ್ರ ಅವರ ಸುಲಲಿತ ಪ್ರಬಂಧಗಳ ಸಂಕಲನ ’ ವರ್ಣಮಯ’. ಈ ಪ್ರಬಂಧ ಸಂಕಲನದಲ್ಲಿ ಬರುವ ನಂಜುಂಡಿ ಮತ್ತು ಗೌರಮ್ಮ ಎಂಬ ಬರಹಗಳಲ್ಲಿ ಲೇಖಕರು ತಮ್ಮ ಸುತ್ತಲಿನ ಸಮಾಜದ ಎಷ್ಟೋ ಮಜಲುಗಳನ್ನು ಕೆಳ, ಮಧ್ಯಮ ಹಾಗೂ ಮೇಲಿನ ವರ್ಗದ ಜನರುಗಳ ನಡುವೆ ಮುಖಾಮುಖಿಯಾಗಿಸುತ್ತಾ ಅವರ ನಡವಳಿಕೆಗಳನ್ನು ಹಾಸ್ಯ ಪ್ರಜ್ಷೆಯೊಂದರಲ್ಲಿಓದುಗರಿಗೆ ಪರಿಚಯಿಸಿದ್ದಾರೆ.
ತಾಯಿ ದೇವರಲ್ಲ, ಅಮ್ಮ ಎನ್ನುವ ಸಂಭ್ರಮ, ಹಗ್ಗದ ಹಾವು, ಬರಹಗಳು ಲೇಖಕರ ಮನೆಯ ಅನುಭವ ಚಿತ್ರಣವನ್ನು ನೀಡುವಂತದ್ದಾಗಿದೆ.
ವಸುಧೇಂದ್ರ ಅವರು ಕನ್ನಡದ ಪ್ರಸಿದ್ಧ ಬರಹಗಾರರು ಹಾಗೂ ಪುಸ್ತಕ ಪ್ರಕಾಶಕರು. ಮುಖ್ಯವಾಗಿ ಕತೆ, ಕಾದಂಬರಿ, ಲಲಿತ ಪ್ರಬಂಧಗಳು ಇವರ ಬರವಣಿಗೆಯ ಪ್ರಕಾರಗಳು. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 1969ರಲ್ಲಿ ಜನಿಸಿದ ವಸುಧೇಂದ್ರ ಅಲ್ಲಿಯೇ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಆನಂತರ ಸುರತ್ಕಲ್ ನಿಂದ ಇಂಜಿನಿಯರಿಂಗ್ ಪದವಿ ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಯ್ ನಿಂದ ಎಂ.ಇ. ಪದವಿ ಪಡೆದಿದ್ದಾರೆ. ಸುಮಾರು 20 ವರ್ಷಗಳ ಕಾಲ ಸಾಫ್ಟ್ ವೇರ್ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಅವರು ಸದ್ಯ ಬೆಂಗಳೂರಿನಲ್ಲಿ ವಾಸವಿದ್ದು, ಸದ್ಯಕ್ಕೆ ಸಾಹಿತ್ಯಿಕ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮನೀಷೆ, ಯುಗಾದಿ, ಚೇಳು, ಹಂಪಿ ಎಕ್ಸ್ ...
READ MORE