ಗ್ರಾಮೀಣ ಜನರ ಬದುಕಿನ ಏಳಿಗೆಗಾಗಿ ಯುವಜನರನ್ನು ಸಂಘಟಿಸಿ ಅವರಲ್ಲಿ ಪ್ರೋತ್ಸಾಹ ತುಂಬುವ ಕಾರ್ಯಕರ್ತರಾಗಿ ದುಡಿಯುತ್ತಿರುವ ಲೇಖಕ ಡಾ.ಪ್ರಕಾಶ್ ಎಸ್. ಪರಿಯೆಂಕರ್ ಅವರು ಗೋವಾ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರು. ಈ ಸಂಕಲನದ ಕಥೆಗಳು ಓದುಗರಿಗೆ ಹೊಸ ಅನುಭವ ನೀಡುವ ವೈವಿಧ್ಯಪೂರ್ಣ ಅಪರೂಪದ ವಸ್ತುಗಳನ್ನು ಹೊಂದಿವೆ. ಪರಿಸರ ಮತ್ತು ಸಾಮಾಜಿಕ ಕಾಳಜಿಯ ಆಶಯವನ್ನು ಹೊಂದಿರುವ ಈ ಕಥೆಗಳನ್ನು ಈ ಹಿಂದೆ ಹಲವು ಕೊಂಕಣಿ ಕಥೆ ಮತ್ತು ಕಾದಂಬರಿಗಳನ್ನು ಅನುವಾದಿಸಿರುವ ಡಾ. ಗೀತಾ ಶೆಣೈ ಅವರು ಸಮರ್ಥ ರೀತಿಯಿಂದ ಕನ್ನಡಕ್ಕೆ ಅನುವಾದಿಸಿದ್ದಾರೆ.
ಗೀತಾ ಶೆಣೈ ಕನ್ನಡದ ಪ್ರಮುಖ ಲೇಖಕಿ. ಇವರು 1954 ಜೂಬ್ 13 ರಂದು ದಕ್ಷಿಣ ಜಿಲ್ಲೆಯಲ್ಲಿ ಜನಿಸಿದರು. ಹಂಪಿಯಿಂದ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಪಿಹೆಚ್.ಡಿ, ಪದವಿ ಪಡೆದಿದ್ದಾರೆ. ಇಂದಿರಾಗಾಂಧಿ ಮಹಿಳಾ ಅಧ್ಯಯನದಲ್ಲಿ ಸಿಡಬ್ಲ್ಯೂಇಡಿ ಕೋರ್ಸ್ ಮುಗಿಸಿದ್ದಾರೆ, ಜೀವನ ಚರಿತ್ರೆ, ಅನುವಾದ ಮತ್ತು ಮಹಿಳಾ ಅಧ್ಯಯನ ಇತ್ಯಾದಿ ಪ್ರಕಾರಗಳಲ್ಲಿ 20ಕ್ಕೂ ಹೆಚ್ಚು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವರ ಮೊದಲ ಕೃತಿ ಝುಂಪಾ ಲಾಹಿರಿಯವರ ಇಂಟರ್‍ಪ್ರಿಟರ್ ಆಫ್ ಮ್ಯಾಲಡೀಸ್ ಕಥಾಸಂಕಲನದ ಅನುವಾದ `ಬೇನೆಗಳ ದುಭಾಷಿ'. ಬೇನೆಗಳ ದುಭಾಷಿ, ಪರಿಸರ ಅರ್ಥಶಾಸ್ತ್, ಮಧ್ಯಕಾಲೀನ ಭಾರತ, ಸಮಾಜಶಾಸ್ತ್ರದ ಸ್ಥಾಪಕ ಪಿತಾಮಹರು, ಪ್ರಾರಂಭಿಕ ಹಂತದ ...
READ MORE