ಲೇಖಕರೇ ಹೇಳಿಕೊಂಡಂತೆ ’ವರ್ತಮಾನದೊಡಲು’ ಕೃತಿ ಅಲ್ಲಲ್ಲಿ ಚದುರಿ ಹೋಗಿರುವ ಚಿಂತನೆಗಳನ್ನೆಲ್ಲ ಒಂದೆಡೆ ಸೇರಿಸಿ ರೂಪಸಿದ್ದು. ಇವುಗಳಲ್ಲಿ ಹಲವು ನಾಡಿನ ಪ್ರಮುಖ ಮಾಧ್ಯಮಗಳಲ್ಲಿ ಈಗಾಗಲೇ ಪ್ರಕಟಗೊಂಡಿವೆ ಅಥವಾ ಪ್ರಸಾರವಾಗಿವೆ. ಓದುಗರ, ಕೇಳುಗರ ಅನುಕೂಲಕ್ಕಾಗಿ ಲೇಖಕರು ಅವುಗಳನ್ನೆಲ್ಲ ಸಂಕಲಿಸಿ ಪ್ರಕಟಿಸಿದ್ದಾರೆ.
ಕಾಲ ಕಾಲಕ್ಕೆ ನಡೆದ ಚಿಂತನೆಗಳಾದ್ದರಿಂದ ಸಹಜವಾಗಿಯೇ ವಸ್ತು ವೈವಿಧ್ಯದಿಂದಲೂ ಕೃತಿ ಗಮನ ಸೆಳೆಯುತ್ತದೆ.
“ರಘುಶಂಖ” ಕಾವ್ಯನಾಮದಿಂದ ಪರಿಚಿತರಾಗಿರುವ ಡಾ. ರಘುನಾಥ ಖರಾಬೆಯವರು ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಭಾತಂಬ್ರಾ ಗ್ರಾಮದವರು. ಶ್ರೀಮತಿ ಗುರಮ್ಮ ಶ್ರೀ ಶಂಕರೆಪ್ಪನವರ ಮಗನಾಗಿ 01-01-1970ರಲ್ಲಿ ಜನಿಸಿದರು. ಎಂ.ಎ; ಎಂ.ಪಿಎಲ್; ಪಿಎಚ್.ಡಿ. ಪದವಿಧರರು. 1996ರಲ್ಲಿ ಗುಲಬರ್ಗಾ ಶ್ರೀ ಶರಣಬಸವೇಶ್ವರ ವಾಣಿಜ್ಯ ಕಾಲೇಜು; ಎಸ್.ಎಸ್. ಖೂಬಾ ಬಸವೇಶ್ವರ ಪದವಿ ಕಾಲೇಜು ಬಸವಕಲ್ಯಾಣದಲ್ಲಿ ಕನ್ನಡ ಉಪನ್ಯಾಸಕರಾಗಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಸದ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗರ್ಮಾತಾಂಡಾದಲ್ಲಿ ಸಹಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಾ. ಶರಣಬಸವಪ್ಪ ಅವರ ಜೀವನ ಸಾಧನೆ (ಎಂ.ಪಿಎಲ್.), ವಚನಕಾರರ ವೃತ್ತಿ ಮೌಲ್ಯಗಳು ಒಂದು ಅಧ್ಯಯನ ...
READ MORE