ಬಲಾಯಿಚಂದ್ ಮುಖ್ಯೋಪಾಧ್ಯಾಯ ಬನ್‌ಪೂಲ್ ಎಂಬ ಕಾವ್ಯನಾಮದಲ್ಲಿ ಬಂಗಾಳಿ ಭಾಷೆಯಲ್ಲಿ ಕೃತಿಗಳನ್ನು ರಚಿಸುತ್ತಿದ್ದ ಪ್ರಮುಖ ಲೇಖಕ. ಪದ್ಮವಿಭೂಷಣ ಪ್ರಶಸ್ತಿ ಪಡೆದ ಇವರ ಕೃತಿಯನ್ನು ಪಾ.ವೆಂ. ಆಚಾರ್ಯ ಕನ್ನಡಕ್ಕೆ ಅನುವಾದ ಮಾಡಿದ್ದಾರೆ.
ಸರಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಆಗಿ ಕೆಲಸ ಮಾಡುತ್ತಿರುವ, ಅಗಣಿತ ಹೆಣಗಳನ್ನು ಫೋಸ್ಟ್ ಮಾರ್ಟಂ ಎಂಬ ಹೆಸರಿನಲ್ಲಿ ಕುಯ್ದು ಹೊಲಿದ ಸರಕಾರಿ ಆಸ್ಪತ್ರೆಯ ಡಾಕ್ಟರ್ ಇದರ ಕಥೆಯ ನಾಯಕ. ಬಡತನ, ಮೋಸ, ಹಾದರ, ಪ್ರೇಮ ವೈಫಲ್ಯ, ವಂಚನೆ, ದಾಂಪತ್ಯ, ಸ್ವಾತಂತ್ರ್ಯ ಚಳುವಳಿ ಹೀಗೆ ಹಲವು ಸಂಗತಿಗಳನ್ನು ಕಥೆ ವಿವರಿಸುತ್ತದೆ.
ಲಾಂಗೂಲಾಚಾರ್ಯ ಎಂದು ಖ್ಯಾತರಾಗಿದ್ದ ಪಾಡಿಗಾರು ವೆಂಕಟರಮಣ ಆಚಾರ್‍ಯರು ಜನಿಸಿದ್ದು 1933ರಲ್ಲಿ. ಉಡುಪಿಯವರಾದ ಪಾ.ವೆಂ. ಅವರ ತಂದೆ ಲಕ್ಷ್ಮೀರಮಣಾಚಾರ್ಯ, ತಾಯಿ ಸೀತಮ್ಮ. ಶಿಕ್ಷಣವನ್ನು ಉಡುಪಿಯಲ್ಲಿ ಪಡೆದ ಅವರು ಶಾಲೆಯಲ್ಲಿ ಕಲಿತಿದ್ದು ಕೇವಲ ಮ್ಯಾಟ್ರಿಕ್ ವರೆಗೆ ಮಾತ್ರ. ಮನೆಯ ಆರ್ಥಿಕ ಸ್ಥಿತಿ ಹೆಚ್ಚಿನ ವ್ಯಾಸಂಗಕ್ಕೆ ಅನುವು ಮಾಡಿಕೊಡಲಿಲ್ಲ. ಕೆಲ ಕಾಲ ಅಂಗಡಿ ಹಾಗೂ ಹೊಟೇಲುಗಳಲ್ಲಿ ಗುಮಾಸ್ತರಾಗಿ ಮತ್ತು ಕೆಲವೆಡೆ ಶಿಕ್ಷಕರಾಗಿ ವೃತ್ತಿ ಜೀವನ ನಡೆಸಿದರು. 1937 ರಲ್ಲಿ ಆರಂಭವಾದ ಉಡುಪಿಯ 'ಅಂತರಂಗ' ಪತ್ರಿಕೆಯ ಸಂಪಾದಕ ಮಂಡಳಿಯ ಸದಸ್ಯರಾಗಿ ಪತ್ರಿಕೋದ್ಯಮಕ್ಕೆ ಬಂದ ಪಾವೆಂ ಅವರು 1941ರಲ್ಲಿ 'ಲೋಕ ಶಿಕ್ಷಣ ಟ್ರಸ್ಟ್' ಸೇರಿದರು. ...
READ MORE