ಕವಿ, ಕಾದಂಬರಿಕಾರ ನಾಗರಾಜ ವಸ್ತಾರೆ ಅವರ ಕವಿತಾ ಸಂಕಲನ-ವಸ್ತಾರೆ ಪದ್ಯಗಳು. ವಿಮರ್ಶಕ ಕೆ.ವಿ.ತಿರುಮಲೇಶ ಅವರು ಕೃತಿ ಕುರಿತು ‘ವಸ್ತಾರೆ ಅವರು ತೀರಾ ವಿಶಿಷ್ಟ ರೀತಿಯ ಪದ್ಯಗಳನ್ನು ಬರೆಯುತ್ತಾರೆ. ಹೆದ್ದಾರಿಗೆ ಒದ್ದು ಬರೆಯುವ ಹಠ. ಅದೇ ಅವರ ಕಾವ್ಯ. ಟಾಯ್ಲೆಟ್ ಪಿಕ್ಚರ್ ಬ್ರೋಶರ್ ಸಹ ಇಲ್ಲಿ ಕಾವ್ಯಕ್ಕೆ ವಸ್ತುವಾಗುತ್ತದೆ ಎಂದು ಶ್ಲಾಘಿಸಿದ್ದಾರೆ. ಕವನದ ವಸ್ತು, ನಿರೂಪಣಾ ಶೈಲಿ, ಸಾಮಾಜಿಕ ಹೊಣೆಗಾರಿಕೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕವಿತೆಗಳು ಓದುಗರ ಗಮನ ಸೆಳೆಯುತ್ತವೆ. .
ನಾಗರಾಜ ವಸ್ತಾರೆ ಅಂತಲೇ ಪರಿಚಿತರಾಗಿರುವ ನಾಗರಾಜ ರಾಮಸ್ವಾಮಿ ವಸ್ತಾರೆ ಅವರು ವೃತ್ತಿಯಲ್ಲಿ ಆರ್ಕಿಟೆಕ್ಟ್ ಆಗಿದ್ದು, ಸಾಹಿತ್ಯವನ್ನು ಪ್ರವೃತ್ತಿಯಾಗಿಸಿಕೊಂಡವರು. ಕಥೆ, ಕಾದಂಬರಿ, ಕವಿತೆ, ಪ್ರಬಂಧ ಹೀಗೆ ಕನ್ನಡ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆಮನೆ ಕಥೆ, ಬಯಲು-ಆಲಯ, ಕಮಾನು-ಕಟ್ಟುಕತೆ ಹೆಸರಿನಲ್ಲಿ ಇವರ ಅಂಕಣಗಳು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ವಸ್ತಾರೆ ಅವರ ಪ್ರಮುಖ ಕೃತಿಗಳೆಂದರೆ ತೊಂಬತ್ತನೇ ಡಿಗ್ರಿ, ಅರ್ಬನ್ ಪ್ಯಾಂಥರ್‍ಸ್, ನಿರವಯವ ಮುಂತಾದವು.ಇವರಿಗೆ ಪುತಿನ ಕಾವ್ಯ ನಾಟಕ ಪುರಸ್ಕಾರ, ಕನ್ನಡ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ಮುಂತಾದ ಪ್ರಶಸ್ತಿಗಳು ಲಭಿಸಿವೆ. ...
READ MORE