ಎಡಪಂಥೀಯ ಚಿಂತಕರೂ, ಮಾರ್ಕ್ಸಿಸ್ಟ್ ಕಾರ್ಯಕರ್ತರೂ ಆಗಿರುವ ಕೆ.ಪಿ ಕೃಷ್ಣನ್ ಕುಟ್ಟಿಯವರು ಬರೆದಿರುವ ಮಲೆಯಾಳದ ಎಂಟು ಸಣ್ಣ ಕಥೆಗಳನ್ನು ಅನುವಾದಕಿಯಾದ ಡಾ. ಪಾರ್ವತಿ ಜಿ. ಐತಾಳ್ ಅವರು ಕನ್ನಡಕ್ಕೆ ತಂದಿದ್ದಾರೆ.
ಡಾ. ಕೆ.ಪಿ ಕೃಷ್ಣನ್ ಕುಟ್ಟಿಯವರ ಕತೆಗಳು ವಯನಾಡಿನ ಕುರಿತಾದ ಪಾತ್ರಗಳ ಜೊತೆ, ಪರಿಸರದ ಜೊತೆ ಹೆಣೆಯಲ್ಪಟ್ಟ ಕತೆಗಳು.
ಪಾರ್ವತಿ ಜಿ.ಐತಾಳ ಅವರು ಕಾಸರಗೋಡು ಜಿಲ್ಲೆಯ ಧರ್ಮತ್ತಡ್ಕ ಎಂಬ ಹಳ್ಳಿಯಲ್ಲಿ ಜುಲೈ 23, 1957ರಂದು ಜನಿಸಿದರು. 1981ರಲ್ಲಿ ಮೈಸೂರಿನ ಮಾನಸಗಂಗೋತ್ರಿಯಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ.ಎ. ಪದವಿ ಪಡೆದರು. 2012ರಲ್ಲಿ ಕಣ್ಣೂರು ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ ಪದವಿಯನ್ನು ಪಡೆದರು. ಮಂಗಳೂರು ಜಿಲ್ಲೆಯ ಮುಲ್ಕಿಯ ವಿಜಯಾ ಕಾಲೇಜಿನಲ್ಲಿ ಏಳು ವರ್ಷಗಳವರೆಗೆ ಪ್ರಾಧ್ಯಾಪಕಿಯಾಗಿ ದುಡಿದ ಪಾರ್ವತಿಯವರು, ಶ್ರೀ ಗಂಗಾಧರ ಐತಾಳರೊಡನೆ ಮದುವೆಯಾದ ಬಳಿಕ 1988ರಲ್ಲಿ ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿಗೆ ಬಂದು ಇಂಗ್ಲಿಷ್ ವಿಭಾಗದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪಾರ್ವತಿ ಅವರು ಅನೇಕ ಸಣ್ಣ ಕಥೆ, ಕವನ, ನಾಟಕ ಬರೆದಿರುವರಾದರೂ, ಅನುವಾದ ಕ್ಷೇತ್ರದಲ್ಲಿ ಹೆಚ್ಚಿನ ...
READ MORE