ಖ್ಯಾತ ವೀಣೆ ವಾದಕ ಶೇಷಣ್ಣ ಅವರು ‘ವೀಣೆ ಶೇಷಣ್ಣ’ ಎಂದೇ ಖ್ಯಾತಿ. ಸಂಗೀತಕ್ಕೆ ಅವರ ಬದುಕಿನ ಸಮರ್ಪಣೆಯು ಅದ್ಭುತ. ಈ ಕುರಿತು ಚಿತ್ರಣ ನೀಡುವ ಕೃತಿ-ವೀಣೆ ಶೇಷಣ್ಣ. ಹಿರಿಯ ಲೇಖಕ ಜಿ.ಟಿ. ನಾರಾಯಣ ರಾವ್ ಅವರು ರಚಿಸಿದ್ದು, ಬದುಕು-ಸಂಗೀತ ಎರಡೂ ಮೇಳೈಸಿದ ಸಂಗಮದಂತೆ, ಬರಹವು ಸುಂದರವಾಗಿದೆ.
ಜಿ.ಟಿ.ನಾರಾಯಣ ರಾವ್ ಅವರು ಪುತ್ತೂರಿನ ಸಮೀಪದ ಮರಿಕೆ ಗ್ರಾಮದಲ್ಲಿ 30-01-1926ರಂದು ಜನಿಸಿದರು. ಮದ್ರಾಸ್ ವಿಶ್ವವಿದ್ಯಾಲಯದಿಂದ ಗಣಿತದಲ್ಲಿ ಎಂ.ಎ. ಪದವಿ ಪಡೆದಿರುವ ಇವರು ಎನ್.ಸಿ.ಸಿ. ಅಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಕರ್ನಾಟಕ ಸಂಗೀತ ಹಾಗೂ ಕನ್ನಡ ಅಭಿಜಾತ ವಾಙ್ಙಯ ಕುರಿತು ಅಪಾರ ಆಸಕ್ತಿ ಹೊಂದಿದ್ದಾರೆ, ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪನ ಮತ್ತೆ ಮೈಸೂರು ವಿಶ್ವವಿದ್ಯಾಲಯದ ಕನ್ನಡ ವಿಶ್ವಕೋಶದ ವಿಜ್ಞಾನ ಸಂಪಾದಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಸಿ.ವಿ. ರಾಮನ್‌ರನ್ನು ಬೆಂಗಳೂರಿನಲ್ಲಿಯೂ, ಎಸ್. ಚಂದ್ರಶೇಖರ್‌ರನ್ನು ಚಿಕಾಗೋದಲ್ಲಿಯೂ ಭೇಟಿಮಾಡಿ ವೈಜ್ಞಾನಿಕ ಜೀವನ ಚರಿತ್ರೆಗಳನ್ನು ಬರೆದಿದ್ದಾರೆ. ಕನ್ನಡಕ್ಕೆ ವಿಪುಲ ಸ್ವತಂತ್ರ ವೈಜ್ಞಾನಿಕ ಕೃತಿಗಳನ್ನೂ, ಕೆಲವು ...
READ MORE